ಬ್ರಹ್ಮಾವರ, ಅಜೆಕಾರು, ಕಾರ್ಕಳ ಪೊಲೀಸ್ ಠಾಣೆಗಳು ಸೀಲ್‌ಡೌನ್

ಜಿಲ್ಲೆಯ ಮೂವರು ಪೊಲೀಸ್ ಸಿಬಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ.

ಠಾಣೆಯ ಕಟ್ಟಡಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಬಳಿಕ, ಎರಡು ದಿನ ನಂತರ ಠಾಣೆಗಳು ಕಾರ್ಯೋನ್ಮುಖವಾಗಲಿವೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಜಿಲ್ಲೆಯ ಮೂವರು ಪೊಲೀಸ್ ಸಿಬಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬ್ರಹ್ಮಾವರ, ಅಜೆಕಾರು ಹಾಗೂ ಕಾರ್ಕಳ ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಬ್ರಹ್ಮಾವರ ಠಾಣೆಯ ಹೆಡ್ ಕಾನ್ಸ್ಟೇಬಲ್ ಅವರಲ್ಲಿ ಸೋಂಕು ಪತ್ತೆಯಾಗಿದೆ.

ಈ ಮೂರು ಠಾಣೆಗಳ ಹಿರಿಯ ಅಧಿಕಾರಿಗಳು, ಪೊಲೀಸ್ ಸಿಬಂದಿಗಳನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಠಾಣೆಗಳನ್ನು ಸೀಲ್‌ಡೌನ್ ಮಾಡಿದ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಕೊರೋನ ಸೋಂಕಿತರ ಸಂಪರ್ಕಕ್ಕೆ ಬಂದವರ ಪಟ್ಟಿ ತಯಾರಿಸಲಾಗುತ್ತಿದ್ದು, ಠಾಣೆಯ ಕಟ್ಟಡಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಬಳಿಕ, ಎರಡು ದಿನ ನಂತರ ಠಾಣೆಗಳು ಕಾರ್ಯೋನ್ಮುಖವಾಗಲಿವೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

Get real time updates directly on you device, subscribe now.