ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿಗೆ ರ್ಯಾಂಕ್ ಸಂಭ್ರಮ

ರಾಜ್ಯ ಮಟ್ಟದಲ್ಲಿ ವಾಣಿಜ್ಯ ವಿಭಾಗದಲ್ಲಿ ಸ್ವಾತಿ ಪೈ 594 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ.

ವಿಜ್ಞಾನ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ  ಸೋಹನ್ ಕುಮಾರ್ ಶೆಟ್ಟಿ 589 ಅಂಕಗಳಿಸಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ಭುವನ್ 588 ಅಂಕಗಳಿಸಿ ಎಂಟನೇ ಸ್ಥಾನ.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: 2017-18 ನೇ ಸಾಲಿನಿಂದ ಸತತವಾಗಿ ಮೂರು ವರ್ಷಗಳಿಂದ ಶೇ 100 ರಷ್ಟು ಫಲಿತಾಂಶವನ್ನು ದಾಖಲಿಸುವಲ್ಲಿ ಕುಂದಾಪುರದ  ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಯಶಸ್ವಿಯಾಗಿದೆ. ಈ ಸಾಧನೆಗೈದ ಕುಂದಾಪುರದ ಏಕೈಕ ಕಾಲೇಜು ಎಂಬ ಖ್ಯಾತಿಗೆ ಪಾತ್ರವಾಗಿದೆ.

ರಾಜ್ಯ ಮಟ್ಟದಲ್ಲಿ ವಾಣಿಜ್ಯ ವಿಭಾಗದಲ್ಲಿ ಸ್ವಾತಿ ಪೈ 594 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು   45 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು  39   ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸೋಹನ್ ಕುಮಾರ್ ಶೆಟ್ಟಿ

ವಿಜ್ಞಾನ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ  ಸೋಹನ್ ಕುಮಾರ್ ಶೆಟ್ಟಿ 589 ಅಂಕಗಳಿಸಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ಭುವನ್ 588 ಅಂಕಗಳಿಸಿ ಎಂಟನೇ ಸ್ಥಾನ ಗಳಿಸಿದ್ದಾರೆ.

ಭುವನ್

ಈ ಬಾರಿಯ ವಿಜ್ಞಾನ ವಿಭಾಗದಲ್ಲಿ 118 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 63 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಮತ್ತು  55   ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

 

 

 

 

 

 

 

 

 

 

Get real time updates directly on you device, subscribe now.