ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ನಿರಂಜನ ಭಟ್ ಜಾಮೀನು ಅರ್ಜಿ ತಿರಸ್ಕೃತ

ಆರೋಪಿ ಫೆ.10ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಜು.27ರಂದು ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನೆಲೆಯಲ್ಲಿ ಜೂನ್ ತಿಂಗಳಲ್ಲಿ ಆರೋಪಿಗೆ ಹದಿನೈದು ದಿನಗಳ ತಾತ್ಕಾಲಿಕ ಜಾಮೀನು ನೀಡಲಾಗಿತ್ತು.

ಕರಾವಳಿ ಕರ್ನಾಟಕ ವರದಿ
ಉಡುಪಿ: ಬಹುಕೋಟಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿರಂಜನ್ ಭಟ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಅ.28, 2019ರಂದು ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಆ ಬಳಿಕ ಆರೋಪಿ ಫೆ.10ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಜು.27ರಂದು ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನೆಲೆಯಲ್ಲಿ ಜೂನ್ ತಿಂಗಳಲ್ಲಿ ಆರೋಪಿಗೆ ಹದಿನೈದು ದಿನಗಳ ತಾತ್ಕಾಲಿಕ ಜಾಮೀನು ನೀಡಲಾಗಿತ್ತು.

ಪ್ರಕರಣದ ಪ್ರಧಾನ ಆರೋಪಿ, ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಜಾಮೀನಿನ ಮೇಲೆ ಹೊರಬಂದಿದ್ದು, ಇನ್ನೋರ್ವ ಆರೋಪಿ, ಭಾಸ್ಕರ ಶೆಟ್ಟರ ಮಗ ನವನೀತ್ ಶೆಟ್ಟಿ ಇನ್ನೂ ಜೈಲಿನಲ್ಲಿದ್ದಾನೆ.

ಜು.28, 2016ರಂದು ಭಾಸ್ಕರ ಶೆಟ್ಟಿಯವರನ್ನು ಇಂದ್ರಾಳಿಯ ಅವರ ಮನೆಯಲ್ಲೇ ಕೊಲೆಗೈಯಲಾಗಿತ್ತು. ಶವವನ್ನು ಜ್ಯೋತಿಷಿ ಆಗಿದ್ದ ಆರೋಪಿ ನಿರಂಜನ ಭಟ್ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ಉಡುಪಿ ಮತ್ತು ದುಬೈಗಳಲ್ಲಿ ಉದ್ಯಮ ಹೊಂದಿದ್ದ ಭಾಸ್ಕರ ಶೆಟ್ಟರ ಬರ್ಬರ ಕೊಲೆಗೆ ಕರ್ನಾಟಕವೇ ಬೆಚ್ಚಿ ಬಿದ್ದಿತ್ತು.

Get real time updates directly on you device, subscribe now.