ಜಯ ಸಿ. ಸುವರ್ಣ ನಿಧಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂತಾಪ

'ಕರಾವಳಿಯ ಸಹಸ್ರಾರು ಬಡವರಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟು ಅವರ ಬದುಕು ರೂಪಿಸಿದ ಸುವರ್ಣ'

ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಸಂತಾಪ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಕೊಡುಗೈ ದಾನಿಯಾಗಿ, ಭಾರತ್ ಬ್ಯಾಂಕ್ ಸ್ಥಾಪನೆ ಮೂಲಕ ಕರಾವಳಿಯ ಸಹಸ್ರಾರು ಬಡವರಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟು ಅವರ ಬದುಕು ರೂಪಿಸಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯ ಸಿ. ಸುವರ್ಣರವರ ಅಗಲಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ತೀವೃ ಶೋಕ ವ್ಯಕ್ತಪಡಿಸಿದೆ.

ಜಯ ಸುವರ್ಣ ಅವರ ಅಗಲಿಕೆ ಸಮಾಜಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಸಂತಾಪ ವ್ಯಕ್ತಪಡಿಸಿದ್ದಾರೆ.

Get real time updates directly on you device, subscribe now.