ಕಾಪು: ಕಾಂಗ್ರೆಸ್ ಪಕ್ಷದಿಂದ ಸುರೇಶ್ ದೇವಾಡಿಗ ಅಮಾನತು

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಕಾಪು ಪುರಸಭಾ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರಾದ ಸುರೇಶ್ ದೇವಾಡಿಗ ಅವರು ಪಕ್ಷದ ವಿಪ್ ಅನ್ನು ಉಲ್ಲಂಘಿಸಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದ ಹಿನ್ನಲೆಯಲ್ಲಿ ಸುರೇಶ್ ದೇವಾಡಿಗರನ್ನು ಪಕ್ಷ ವಿರೋಧಿ ಚಟುವಟಿಕೆ ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

ಸುರೇಶ್ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.