ನಂದಳಿಕೆ – ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರಲ್ಲಿ 65ನೇ ಕನ್ನಡ ರಾಜೋತ್ಸವ ಕಾರ್ಯಕ್ರಮ.

ಕರಾವಳಿ ಕರ್ನಾಟಕ ವರದಿ
ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಕಳ ತಾಲೂಕು ಘಟಕ ಮತ್ತು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ -ಅಬ್ಬನಡ್ಕ  ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ನವೆಂಬರ್ 1ರಂದು ಆದಿತ್ಯವಾರ ಮಧ್ಯಾಹ್ನ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರಲ್ಲಿ 65ನೇ ಕನ್ನಡ ರಾಜೋತ್ಸವ ಕಾರ್ಯಕ್ರಮ ಜರಗಲಿದೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮತ್ತು 16ನೆಯ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಬೇಲಾಡಿ ಎಂ. ವಿಠಲ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿಗಳಾದ ಬೆಳ್ಮಣ್ಣು ಅನುಬೆಳ್ಳೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಂದಳಿಕೆ –ಅಬ್ಬನಡ್ಕ ಶ್ರೀ ದುಗರ್ಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೋಳ ಉದಯ ಅಂಚನ್, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಲಿಯೋ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಯುವ ಸಾಹಿತಿ ಇಂದುಚೇತನ ಬೋರುಗುಡ್ಡೆಯವರಿಗೆ ಸನ್ಮಾನ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದೊಂದಿಗೆ ಶರತ್ ದೇವಾಡಿಗ ಮತ್ತು ಕುಮಾರಿ ನೀಯಾ ಶೆಟ್ಟಿಯವರಿಂದ ‘ಕನ್ನಡ ಗೀತ ಗಾಯನ’ ಕಾರ್ಯಕ್ರಮ ಜರಗಲಿದೆ. ಕೋವಿಡ್ ನಿಯಮಾನುಸಾರದೊಂದಿಗೆ ಅತ್ಯಂತ ಸರಳ ರೀತಿಯಲ್ಲಿ ಕಾರ್ಯಕ್ರಮ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Get real time updates directly on you device, subscribe now.