ತೆಕ್ಕಟ್ಟೆ ಲಯನ್ಸ್ ಕ್ಲಬ್‌ನಿಂದ ಭಾಗವತ ಪ್ರಸಾದ್ ಮೊಗೆಬೆಟ್ಟುಗೆ ಸನ್ಮಾನ

ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶಂಕರ್ ಶೆಟ್ಟಿ ಬವಳಾಡಿ ಮತ್ತು ವಲಯ ಅಧ್ಯಕ್ಷರಾದ ಕೆ. ಸೀತಾರಾಮ ಶೆಟ್ಟಿ, ಪ್ರಸಾದ ಮೊಗೆಬೆಟ್ಟು ಅವರ ಕನ್ನಡ ತಾಯಿಯ ಸೇವೆಯ ಕುರಿತು ಮಾತನಾಡಿದರು.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ತೆಕ್ಕಟ್ಟೆ ಲಯನ್ಸ್ ಕ್ಲಬ್ ವತಿಯಿಂದ ಶ್ರೇಷ್ಠ ಯಕ್ಷಗಾನ ಪ್ರಸಂಗಕರ್ತ ಹಾಗೂ ಭಾಗವತರಾದ ಪ್ರಸಾದ್ ಮೊಗೆಬೆಟ್ಟು ಇವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತೆಕ್ಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶಂಕರ್ ಶೆಟ್ಟಿ ಬವಳಾಡಿ ಮತ್ತು ವಲಯ ಅಧ್ಯಕ್ಷರಾದ ಕೆ. ಸೀತಾರಾಮ ಶೆಟ್ಟಿ ಇವರು ಪ್ರಸಾದ ಮೊಗೆಬೆಟ್ಟು ಅವರ ಕನ್ನಡ ತಾಯಿಯ ಸೇವೆಯ ಕುರಿತು ಮಾತನಾಡಿದರು.

ಲಿಯೋ ಕ್ಲಬ್ ಅಧ್ಯಕ್ಷರಾದ ರಜತ ಎಸ್. ಶೆಟ್ಟಿ ಮತ್ತು ಕಾರ್ಯದರ್ಶಿಯಾದ ಮದ್ವೇಶ್ ಶೆಟ್ಟಿ ಉಪಸ್ಥಿತರಿದ್ದರು.

ಲಯನ್ ಸುಧೀರ್ ಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಕಾರ್ಯದರ್ಶಿ ಮಹೇಶ್ ಚಂದ್ರ ಶೆಟ್ಟಿ ವಂದಿಸಿದರು. ಈ ಸಂದರ್ಭದಲ್ಲಿ ಲಯನ್ ಕ್ಲಬ್ ಸರ್ವ ಸದಸ್ಯರು ಉಪಸ್ಥಿತರಿದ್ದು, ಸಹಕರಿಸಿದರು.

 

 

 

 

Get real time updates directly on you device, subscribe now.