ಉಡುಪಿ: ಕೇಂದ್ರ, ರಾಜ್ಯ ಸರಕಾರಗಳ ರೈತ ವಿರೋಧಿ ನೀತಿಗಳ ವಿರುದ್ದ ಸಹಿ ಸಂಗ್ರಹ ಅಭಿಯಾನ ಪ್ರದರ್ಶನ

ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಅವರಿಂದ ಉದ್ಘಾಟನೆ.

ಸಾರ್ವಜನಿಕರಿಗೆ ಅರಿವು ಮೂಡಿಸುವ ಜೊತೆಗೆ ಸರಕಾರದ ಗಮನ ಸೆಳೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರದ ಭೂ ಮಸೂದೆ ಕಾಯ್ದೆ, ತಿದ್ದುಪಡಿ ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಜಿಲ್ಲೆಯ 1111 ಬೂತ್ ಗಳಲ್ಲಿ ಸಂಗ್ರಹಿಸಿದ ಸಹಿಯ ಪ್ರತಿಯ ಪ್ರದರ್ಶನವನ್ನು ಉಡುಪಿ ಬನ್ನಂಜೆ ನಾರಾಯಣ ಗುರು ಸಭಾಭವನ ಬಳಿ ನ.17ರಂದು ಮಂಗಳವಾರ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಉದ್ಘಾಟಿಸಲಿರುವರು.

ಸಹಿ ಸಂಗ್ರಹದ ಪ್ರತಿಯನ್ನು ಬನ್ನಂಜೆಯಿಂದ – ಕಡಿಯಾಳಿ ತನಕ ವಿಭಿನ್ನ ರೀತಿಯಲ್ಲಿ ಪ್ರದರ್ಶನ ಮಾಡಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಜೊತೆಗೆ ಸರಕಾರದ ಗಮನ ಸೆಳೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Get real time updates directly on you device, subscribe now.