ಉಡುಪಿ: ಹೈಟೆಕ್ ವೇಶ್ಯಾವಾಟಿಕೆ ಆರೋಪದಲ್ಲಿ ಮೂವರ ಬಂಧನ

ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲ್ ಕೋಣೆಯಲ್ಲಿ ವೇಶ್ಯಾವಾಟಿಕೆಗೆ ಸಂಬಂಧಿಸಿ ಆರೋಪಿಗಳನ್ನು ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲ್ ಕೋಣೆಯಲ್ಲಿ ವೇಶ್ಯಾವಾಟಿಕೆಗೆ ಸಂಬಂಧಿಸಿ ಆರೋಪಿಗಳನ್ನು ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.

ಶೇಖರ ಶೆಟ್ಟಿ, ಜೋನ್ಸನ್ ಡಿ’ಆಲ್ಮೇಡಾ, ಹರ್ಷಿತ್ ಎಂಬವರು ಉದ್ಯಮಿ ದಿ. ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಎಂಬವರ ಹೊಟೇಲ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

ಆರೋಪಿಗಳಿಂದ ಮೊಬೈಲ್ ಫೋನ್‌ಗಳು, ನಗದು 6,730ರೂ. ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.