ಗೆಲುವು ಕಾಂಗ್ರೆಸ್‌ನದ್ದು, ಮೈತ್ರಿ ಸರ್ಕಾರದ್ದಲ್ಲ. ಜಯನಗರದ ಗೆಲುವಿಗೆ ಸಿದ್ದರಾಮಯ್ಯ ವಿಶ್ಲೇಷಣೆ

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಭರ್ಜರಿ ಜಯಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ

The Congress has won the election in Bengaluru’s Jayanagar constituency in Karnataka, where assembly polls were held on June 11.

ಮೈಸೂರು: ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೈತ್ರಿ ಸರ್ಕಾರದ ಗೆಲುವಲ್ಲ, ಕಾಂಗ್ರೆಸ್ ಪಕ್ಷದ ಗೆಲುವು ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜಯನಗರದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ನಮ್ಮ ಪಕ್ಷಕ್ಕೆ ಮತ ಹಾಕಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಕೃತಜ್ಞತೆ ತಿಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ತುಂಬಾ ಉತ್ಸಾಹದಿಂದ ಕೆಲಸ ಮಾಡಿದ್ದಾರೆ. ಹಾಗಾಗಿ ಗೆದ್ದಿದ್ದೇವೆ ಎಂದು ಸೌಮ್ಯರೆಡ್ಡಿ ಅವರಿಗೂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದರು.

ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಜಯನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಜಯ ದಾಖಲಿಸಿದ್ದಾರೆ. ಅವರಿಗೆ ತೀವ್ರ ಸ್ಪರ್ಧೆಯೊಡ್ಡಿದ ಬಿಜೆಪಿಯ ಬಿ.ಎನ್. ಪ್ರಹ್ಲಾದ್ ಇಲ್ಲಿ ಸೋಲೊಪ್ಪಿಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ಅವರ ನಿಧನದಿಂದ ಇಲ್ಲಿನ ಚುನಾವಣೆ ಜೂನ್ 11ಕ್ಕೆ ಮುಂದೂಡಿತ್ತು. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ 2,889 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ.ಎನ್. ಪ್ರಹ್ಲಾದ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕ್ರಮವಾಗಿ ಸೌಮ್ಯ ರೆಡ್ಡಿ 54, 457, ಬಿ.ಎನ್. ಪ್ರಹ್ಲಾದ್ 51, 568, ರವಿಕೃಷ್ಣಾ ರೆಡ್ಡಿ 1,861 ಮತಗಳನ್ನು ಪಡೆದಿದ್ದಾರೆ.

Get real time updates directly on you device, subscribe now.