ಉಡುಪಿ: ಮೃತ ಕುಂದಾಪುರದ ವ್ಯಕ್ತಿಗೆ ಕೊರೋನಾ ಸೋಂಕು ದೃಢ
ಮೃತಪಟ್ಟ ಕುಂದಾಪುರ ತಾಲೂಕಿನ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಸೋಂಕಿನಿಂದ ಸಾವಪ್ಪಿರುವುದು ದೃಢ ಪಟ್ಟಿದೆ.
ಕೊರೋನಾ ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆ ವರದಿ ಮೇ.16ರಂದು ಬಂದಿದ್ದು, ಸೋಂಕು ದೃಢಪಟ್ಟಿದೆ.
ಕರಾವಳಿ ಕರ್ನಾಟಕ ವರದಿ
ಉಡುಪಿ: ಮಣಿಪಾಲದ ಕೆ.ಎಂ.ಸಿಯಲ್ಲಿ ಮೃತಪಟ್ಟ ಕುಂದಾಪುರ ತಾಲೂಕಿನ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಸೋಂಕಿನಿಂದ ಸಾವಪ್ಪಿರುವುದು ದೃಢ ಪಟ್ಟಿದೆ. ಇದರೊಂದಿಗೆ ಕೊರೋನಾಗೆ ಬಲಿಯಾದ ಉಡುಪಿ ಜಿಲ್ಲೆಯ ಮೊದಲ ವ್ಯಕ್ತಿ ಇವರಾಗಿದ್ದಾರೆ.
ಮಹಾರಾಷ್ಟ್ರದಿಂದ ಮೇ.5ರಂದು ಬಂದಿದ್ದ ವ್ಯಕ್ತಿ(54ವರ್ಷ)ಯನ್ನು ಕುಂದಾಪುರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರಿಗೆ ತೀವೃ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ಮೇ.13ರಂದು ದಾಖಲಿಸಲಾಗಿದ್ದು, ಮೇ.14ರಂದು ತೀವೃ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಕೊರೋನಾ ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆ ವರದಿ ಮೇ.16ರಂದು ಬಂದಿದ್ದು, ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಸಂಪರ್ಕದಲ್ಲಿದ್ದ ಆಸ್ಪತ್ರೆಯ ಕೆಲವು ಸಿಬಂದಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಎಂದಿನಂತೆ ಆಸ್ಪತ್ರೆಯ ತುರ್ತು ವಿಭಾಗ ಮತ್ತು ಹೊರರೋಗಿ ವಿಭಾಗ ಬೆಳಿಗ್ಗೆ 8-30ರಿಂದ 1ಗಂಟೆ ತನಕ ಕಾರ್ಯನಿರ್ವಹಿಸಲಿದೆ ಎಂದು ಕೆ.ಎಂ.ಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ತಿಳಿಸಿದ್ದಾರೆ.