ಮಕ್ಕಳ ಹಿತಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ, ಯಾರೊಬ್ಬರ ಪ್ರತಿಷ್ಠೆಗಾಗಿ ಅಲ್ಲ: ಸುರೇಶ್ ಕುಮಾರ್

ಕಂಟೈನ್‌ಮೆಂಟ್ ವಲಯಗಳೆಂದು ಘೋಷಿಸಲಾದ ಸ್ಥಳಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಂಟೇನ್ಮೆಂಟ್ ವಲಯ ಎಂದು ಘೋಷಿತವಾದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುನರಾವರ್ತಿತ ಪರೀಕ್ಷಾರ್ಥಿ ಎಂದು ಪರಿಗಣಿಸದೇ ಪೂರಕ ಪರೀಕ್ಷೆ ಸಂದರ್ಭ ಅವಕಾಶ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕಂಟೈನ್‌ಮೆಂಟ್ ವಲಯಗಳೆಂದು ಘೋಷಿಸಲಾದ ಸ್ಥಳಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಕ್ಕಳ ಹಿತದೃಷ್ಠಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ ಹೊರತು ಯಾರೊಬ್ಬರ ಪ್ರತಿಷ್ಠೆಗಾಗಿ ಅಲ್ಲ ಎಂದು ಸಚಿವರು ಬೆಂಗಳೂರು ಆಕಾಶವಾಣಿ ಸಂದರ್ಶನದಲ್ಲಿ ಸ್ಪಷ್ಟಪಡಿಸಿದರು. ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಮಾನದಂಡವಾಗಿರುವುದರಿಂದ ಪರೀಕ್ಷೆ ನಡೆಸಬೇಕಾಗಿದೆ ಎಂದರು.

ಪರೀಕ್ಷೆ ನಡೆಯುವ ದಿನದ ಆಸುಪಾಸಿನಲ್ಲಿ ಕಂಟೇನ್ಮೆಂಟ್ ವಲಯ ಎಂದು ಘೋಷಿತವಾದ ಸಂದರ್ಭದಲ್ಲಿ ಅಲ್ಲಿನ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಸಂದರ್ಭ ಅವಕಾಶ ನೀಡಲಾಗುವುದು. ಅವರನ್ನು ಪುನರಾವರ್ತಿತ ಪರೀಕ್ಷಾರ್ಥಿ ಎಂದು ಪರಿಗಣಿಸದೇ ಹೊಸ ಪರೀಕ್ಷಾರ್ಥಿ ಎಂದೇ ಪರಿಗಣಿಸಿ ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಜುಲೈ 31ರೊಳಗೆ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸಂದರ್ಶನವು ಮೇ.25ರ ಬೆಳಿಗ್ಗೆ 7:15ಕ್ಕೆ ರಾಜ್ಯದ ಎಲ್ಲ ಬಾನುಲಿ ಕೇಂದ್ರಗಳಿಂದ ಪ್ರಸಾರಗೊಳ್ಳಲಿದೆ.

 

Get real time updates directly on you device, subscribe now.