ಜೂನ್.1ರಿಂದ ದೇವಸ್ಥಾನ ಓಪನ್ : ಕೋಟ ಶ್ರೀನಿವಾಸ ಪೂಜಾರಿ

ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಜೂನ್.1ರಿಂದ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಎಲ್ಲ ದೇವಾಲಯಗಳಲ್ಲಿ ಪೂಜೆ  ನಡೆಸಲು ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಂಡು ದೇವರ ದರ್ಶನಕ್ಕೆ ಅವಕಾಶ ನೀಡಲಾಗುವೆಂದು ಸಚಿವರು ಹೇಳಿದ್ದಾರೆ. ಕೋವಿಡ್ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಶರತ್ತುಗಳು ಅನ್ವಯವಾಗುವುದಾಗಿ ಸಚಿವರು ಹೇಳಿರುವುದು ವರದಿಯಾಗಿದೆ.

ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ದೇವಾಯಗಳಿಗೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಆನ್‌ಲೈನ್ ಸೇವೆಗೆ ಅವಕಾಶ ನೀಡಿದ್ದ ಮುಜರಾಯಿ ಇಲಾಖೆ ಈಗ ದೇವಾಯಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲು ಮುಂದಾಗಿರುವುದು ಹೊಸ ಬೆಳವಣಿಗೆಯಾಗಿದೆ.

ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

 

Get real time updates directly on you device, subscribe now.