ಕರಾವಳಿಯಲ್ಲಿ ಭಾರೀ ಗಾಳಿ ಮಳೆ ಸಾಧ್ಯತೆ: ಯಲ್ಲೊ ಅಲರ್ಟ್

ಅರಬ್ಬಿ ಸಮುದ್ರದಲ್ಲಿ ಭಾರೀ ಚಂಡಮಾರುತವೆದ್ದಿದ್ದು, ಭಾರೀ ಗಾಳಿ ಬೀಸುವ ಸಾಧ್ಯತೆ. ಮೀನುಗಾರರಿಗೆ ದಡಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಯಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಭಾರೀ ಚಂಡಮಾರುತವೆದ್ದಿದ್ದು, ಭಾರೀ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರಿಗೆ ದಡಕ್ಕೆ ತೆರಳುವಂತೆ ಸೂಚಿಸಲಾಗಿದೆ. ಭಾರೀ ಗಾಳಿ ಹಿನ್ನೆಲೆಯಲ್ಲಿ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು , ಹಾಸನ, ಮೈಸೂರು, ಶಿವಮೊಗ್ಗಗಳಲ್ಲಿ ಇಂದು ಮತ್ತು ಸೋಮವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

Get real time updates directly on you device, subscribe now.