ಡ್ರಗ್ಸ್ ಪ್ರಕರಣ: ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ಪೊಲೀಸ್ ದಾಳಿ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ ಪೆಡ್ಲರ್ಸ್ ಜೊತೆ ನಂಟು ಹೊಂದಿದ್ದಾರೆ ಎನ್ನಲಾದ ಹಿನ್ನಲೆ.

ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಮನೆಗೆ ಸಿಸಿಬಿ ಅಧಿಕಾರಿಗಳು ಮುಂಜಾನೆ ದಾಳಿ ನಡೆಸಿದ್ದಾರೆ.

ಮುತ್ತಪ್ಪ ರೈ ಅವರ ಸದಾಶಿವನಗರ ಮತ್ತು ಬಿಡದಿಯಲ್ಲಿರುವ ಮನೆಗಳಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ ಪೆಡ್ಲರ್ಸ್ ಜೊತೆ ನಂಟು ಹೊಂದಿದ್ದಾರೆ ಎನ್ನಲಾದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮನೆಗಳಿಗೆ ದಾಳಿ ಮಾಡಿದ್ದಾರೆ. ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Get real time updates directly on you device, subscribe now.