ಆಡಳಿತ ಮಂಡಳಿಯ ಅಧ್ಯಕ್ಷರು ಶಾಸಕರಾದ ಖುಷಿ: ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸುಕುಮಾರ ಶೆಟ್ಟಿಗೆ ಸನ್ಮಾನ

ಡಾ. ಬಿ. ಬಿ. ಹೆಗ್ಡೆ ಕಾಲೇಜು ಆಡಳಿತ ಮಂಡಳಿಯ ಅಧ್ಕಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಕಾಲೇಜಿನ ಬೋಧಕ-ಬೋಧಕೇತರರು ಸನ್ಮಾನಿಸಿದರು.

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಕಾಲೇಜು ಆಡಳಿತ ಮಂಡಳಿಯ ಅಧ್ಕಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಕಾಲೇಜಿನ ಬೋಧಕ-ಬೋಧಕೇತರರು ಸನ್ಮಾನಿಸಿದರು.

ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು ಶಾಸಕನಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕರ್ಯಗಳು ಆಗಬೇಕಿದೆ. ಆ ನಿಟ್ಟಿನಲ್ಲಿ ನಾನು ನಿರಂತರವಾಗಿ ಜನರ ಸೇವೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಸನ್ಮಾನ ಸ್ವೀಕರಿಸಿ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಹೇಳಿದರು.

ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಮೂಲತಃ ಉತ್ತಮ ಆಡಳಿತಗಾರರು, ಈ ಹಿನ್ನಲೆಯಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಿರುವುದು ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮುನ್ನುಡಿಯಾಗುತ್ತದೆ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಶ್ರೀ ಸೀತರಾಮ ನಕ್ಕತ್ತಾಯರವರು ಸನ್ಮಾನಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್‍ರವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಮೊದಲಿನಿಂದಲೂ ಜನ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಈಗ ಅವರು ಶಾಸಕರಾಗಿ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ನಿರತರಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಕುಮಾರ್ ಶೆಟ್ಟಿ ಕೋವಾಡಿ ಅಭಿನಂದನೆ ಮಾತುಗಳನ್ನಾಡಿದರು. ವಾಣಿಜ್ಯ ಉಪನ್ಯಾಸಕಿ ಶ್ರೀಮತಿ ವೀಣಾ ಭಟ್ ಪ್ರಾರ್ಥಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ಶಿವರಾಜ್ ಸಿ ದೇವಾಡಿಗ, ನಾವುಂದ ವಂದಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.

Get real time updates directly on you device, subscribe now.