ಧರ್ಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ನಿರ್ಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹೊರಡುವ ಮುನ್ನ ವೈದರೊಂದಿಗೆ ಸಂವಾದ ನಡೆಸಿದರು.

ಉಜಿರೆ: ಧರ್ಮಸ್ಥಳದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹೊರಡುವ ಮುನ್ನ ವೈದರೊಂದಿಗೆ ಸಂವಾದ ನಡೆಸಿದರು.

ಬಳಿಕ ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿದ್ದ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಗಳನ್ನು ಭೇಟಿಯಾದರು.

ಆಸ್ಪತ್ರೆ ಸಿಬ್ಬಂದಿ ಜೊತೆಗೂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಅಲ್ಲಿಂದ ಹೊರಟರು.

ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು 12 ದಿನಗಳ ಕಾಲ ಚಿಕಿತ್ಸೆ ನೀಡಿದ ಡಾ. ಪ್ರಶಾಂತ್ ಶೆಟ್ಟಿ ನೇತೃತ್ವದ ವೈದ್ಯರ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದರು. ತಮ್ಮ ಯೋಗಕ್ಷೇಮ ವಿಚಾರಿಸಲು ಬಂದಿದ್ದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರಿಗೆ ವಿಶೇಷ ಧನ್ಯವಾದ ತಿಳಿಸಿದರು.

ಶಾಂತಿ ವನದ ಕಾರ್ಯದರ್ಶಿಗಳಾದ ಸೀತಾರಾಮ ಶೆಟ್ಟಿಯವರು ಸಿದ್ದರಾಮಯ್ಯ ಅವರನ್ನು ಬೀಳ್ಕೊಟ್ಟರು.

Get real time updates directly on you device, subscribe now.