ರವಿ ಬೆಳಗೆರೆ ಜಾಮೀನು ರದ್ದತಿಗೆ ಹೈಕೋರ್ಟ್ ನಿರಾಕರಣೆ

ನ್ಯಾಯಮೂರ್ತಿ ಜಾನ್ ಮೈಕಲ್ ಡಿ’ ಕುನ್ಹ ಅವರ ಏಕ ಸದಸ್ಯ ಪೀಠದಿಂದ ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ

ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯನ್ನು ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿರುವುದರಿಂದ ಆರೋಪಿಯ ಜಾಮೀನು ರದ್ದು ಮಾಡಲು ಸಕಾರಣವಿಲ್ಲ.

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತನ ಕೊಲೆಗೆ ಸುಪಾರಿ ನೀಡಿದ ಪ್ರಕರಣದ ಆರೋಪಿ ಪತ್ರಕರ್ತ ರವಿ ಬೆಳಗೆರೆಯವರ ಜಾಮೀನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿ ಜಾನ್ ಮೈಕಲ್ ಡಿ’ ಕುನ್ಹ ಅವರ ಏಕ ಸದಸ್ಯ ಪೀಠವು ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿತು.

ಆರೋಪಿ ಪ್ರಭಾವಿಯಾಗಿರುವುದರಿಂದ ಸಾಕ್ಷಿಗಳಿಗೆ ಬೆದರಿಕೆ ಒಡ್ಡುವ ಸಾಧ್ಯತೆ ಇದೆ ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿತ್ತು. ಆರೋಪಿ ನ್ಯಾಯಾಲಯದ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿಲ್ಲ. ಈಗಾಗಲೇ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯನ್ನು ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿರುವುದರಿಂದ ಆರೋಪಿಯ ಜಾಮೀನು ರದ್ದು ಮಾಡಲು ಸಕಾರಣವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು.

Get real time updates directly on you device, subscribe now.