ಮಾಜಿ ಕೇಂದ್ರ ಸಚಿವ ವಿ ಧನಂಜಯ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಹಿಂದಿನಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ(1996) ಧನಂಜಯ್ ಕುಮಾರ್ ಅವರು ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದರು.

ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿರುವ ಅವರು, ಬಿಜೆಪಿ ತೊರೆದು, ಬಿಎಸ್ ಯಡಿಯೂರಪ್ಪ ಅವರ ಕೆಜೆಪಿ ಪಕ್ಷಕ್ಕೂ ಸೇರಿದ್ದರು.ಧನಂಜಯ್ ಕುಮಾರ್ ಮಾಜಿ ಸಂಸದರೂ ಹೌದು.10ನೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿಸದ್ದ ಧನಂಜಯ ಕುಮಾರ್, ಕಾಂಗ್ರೆಸ್ ಧುರೀಣ ಜನಾರ್ದನ ಪೂಜಾರಿ ಅವರನ್ನು ಸೋಲಿಸಿ, ಸಂಸದರಾಗಿದ್ದರು.

ಬಿಜೆಪಿಯಲ್ಲಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವರೂ ಆಗಿದ್ದ ಅವರು, ಬಿ ಎಸ್ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ನಂತರ ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದರು. ಮತ್ತೆ ಬಿ ಎಸ್ ವೈ ಬಿಜೆಪಿಗೆ ಹಿಂದಿರುಗಿದ ನಂತರ, ಕೆಲವು ವೈಮನಸ್ಯದಿಂದಾಗಿ ಅವರು ಕಾಂಗ್ರೆಸ್ ಸೇರಿದ್ದಾರೆ.

Get real time updates directly on you device, subscribe now.