ದಿನೇಶ್ ಗುಂಡೂರಾವ್ ಕೆಪಿಸಿಸಿ ನೂತನ ಅಧ್ಯಕ್ಷ. ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ

ಅಚ್ಚರಿಯ ಬೆಳವಣಿಗೆ ಒಂದರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು: ಅಚ್ಚರಿಯ ಬೆಳವಣಿಗೆ ಒಂದರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಕಟಣೆ ಹೊರಡಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿ ಮತ್ತು ಕೆಲವು ಖಾತೆಗಳ ಹೊಣೆ ಹೊತ್ತಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ವಹಿಸುವ ಮಾತುಗಳು ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಕೇಳಿಬರುತ್ತಿತ್ತು.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಿನೇಶ್ ಗುಂಡೂರಾವ್ ಅವರ ಜೊತೆಗೆ ಸಾಕಷ್ಟು ನಾಯಕರ ಹೆಸರುಗಳು ಕೇಳಿಬರುತ್ತಿದ್ದವು. ಹಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು.

ಅಧ್ಯಕ್ಷರ ನೇಮಕ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಜಾತಿವಾರು, ಪ್ರದೇಶವಾರು, ರಾಜ್ಯದಲ್ಲಿ ನಾಯಕರ ಪ್ರಭಾವ ಇತ್ಯಾದಿಯನ್ನು ಪರಿಗಣಿಸಿ ಆಯ್ಕೆ ಮಾಡಿದೆ.

ಕರ್ನಾಟಕ ರಾಜ್ಯದ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಸಮಿತಿಯಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಈಶ್ವರ ಖಂಡ್ರೆ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ದೊರಕಿದೆ ಎನ್ನಲಾಗಿದೆ.

Get real time updates directly on you device, subscribe now.