ಮುಸ್ಲಿಂ ಜನಸಂಖ್ಯೆ ನಿಯಂತ್ರಿಸಿ. ಅಲ್ಪಸಂಖ್ಯಾತ ಮಾನ್ಯತೆ ರದ್ದುಪಡಿಸಿ: ಪ್ರವೀಣ್ ತೊಗಾಡಿಯಾ

ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆಯನ್ನು ರದ್ದುಗೊಳಿಸಬೇಕು ಮತ್ತು ಅವರ ಜನಸಂಖ್ಯೆ ನಿಯಂತ್ರಿಸಲು ಎರಡು ಮಕ್ಕಳ ಮಿತಿ ಹೇರಬೇಕು ಎಂದು ವಿಶ್ವ ಹಿಂದೂ ಪರಿಷತ್ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಆಗ್ರಹಿಸಿದ್ದಾರೆ.

ಜೈಪುರ: ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆಯನ್ನು ರದ್ದುಗೊಳಿಸಬೇಕು ಮತ್ತು ಅವರ ಜನಸಂಖ್ಯೆ ನಿಯಂತ್ರಿಸಲು ಎರಡು ಮಕ್ಕಳ ಮಿತಿ ಹೇರಬೇಕು ಎಂದು ವಿಶ್ವ ಹಿಂದೂ ಪರಿಷತ್ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೊಗಾಡಿಯಾ, ಜನರಿಂದ ಸಂಗ್ರಹಿಸಿದ ತೆರಿಗೆ ಹಣವನ್ನು ಮುಸ್ಲಿಮರಿಗಾಗಿ ಖರ್ಚು ಮಾಡಬಾರದು. ಅದರ ಬದಲು ಇತರೆ ಸಮುದಾಯದ ಬಡವರ ಕಲ್ಯಾಣಕ್ಕಾಗಿ ಖರ್ಚು ಮಾಡಲಿ ಎಂದು ಹೇಳಿದ್ದಾರೆ.

ನಮ್ಮ ನೂತನ ಸಂಘಟನೆ ರಾಜಕೀಯದ ಮೇಲೆ ಪ್ರಭಾವ ಬೀರಲು ದೇಶದಲ್ಲಿ 20 ಕೋಟಿ ಹಿಂದೂಗಳ ಮತ ಬ್ಯಾಂಕ್ ಅನ್ನು ಸೃಷ್ಟಿಸಲಿದೆ ಎಂದು ಇತ್ತೀಚಿಗಷ್ಟೇ ಅಂತರಾಷ್ಟ್ರೀಯ ಹಿಂದೂ ಪರಿಷತ್ ಸ್ಥಾಪಿಸಿದ ತೊಗಾಡಿಯಾ ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿವಾದಾತ್ಮಕ ನಾಯಕ, ಹಣದುಬ್ಬರ, ರೈತರ ಆತ್ಮಹತ್ಯೆ ಮತ್ತು ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

Get real time updates directly on you device, subscribe now.