ಕರಾವಳಿಯ ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ. ಎ. ಮೊಹಿದಿನ್ ಇನ್ನಿಲ್ಲ

ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ. ಎ. ಮೊಹಿದಿನ್ (81) ಇಂದು ಮುಂಜಾನೆ ನಿಧನರಾಗಿದ್ದಾರೆ.

ಮಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ. ಎ. ಮೊಹಿದಿನ್ (81) ಇಂದು ಮುಂಜಾನೆ ನಿಧನರಾಗಿದ್ದಾರೆ. ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬಳಿಕ ಚೇತರಿಸಿಕೊಂಡಿದ್ದರು. ನಂತರ ಬೆಂಗಳೂರಿಗೆ ತೆರಳಿದ ಅವರು, ಮತ್ತೆ ಅನಾರೋಗ್ಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

1978ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದ ಅವರು, ಮುಂದೆ ಜನತಾ ದಳ ಸೇರಿ, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು.

ಮಾಜಿ ಸಿಎಂ ಜೆ.ಎಚ್. ಪಟೇಲ್ ಸರಕಾರದಲ್ಲಿ ಸಣ್ಣ ಕೈಗಾರಿಕೆ ಮತ್ತು ನಂತರ ಉನ್ನತ ಶಿಕ್ಷಣ ಸಚಿವರಾಗಿದ್ದರು. ಜನತಾ ದಳ ವಿಭಜನೆಗೊಂಡಾಗ ತಟಸ್ಥರಾಗಿದ್ದ ಅವರು ಬಳಿಕ ಮತ್ತೆ ಕಾಂಗ್ರೆಸ್ ಸೇರಿದ್ದರು. ಅವರ ಆತ್ಮಕಥನ ‘ನನ್ನೊಳಗಿನ ನಾನು’ ಸಿದ್ಧಗೊಂಡಿದ್ದು, ಜು.21ರಂದು ಬಿಡುಗಡೆಗೊಳ್ಳಲಿದೆ.

Get real time updates directly on you device, subscribe now.