ಕೊಲೆ ಆರೋಪಿಗೆ ಹಾರ ಹಾಕಿ ಸನ್ಮಾನ! ಮಗನ ಕೃತ್ಯ ಒಪ್ಪಲು ಸಾಧ್ಯವಿಲ್ಲ ಎಂದ ಯಶ್ವಂತ್ ಸಿನ್ಹಾ

ಕೊಲೆ ಆರೋಪಿಗಳಿಗೆ ಹಾರ ಹಾಕಿ ಆಕ್ರೋಶಕ್ಕೆ ತುತ್ತಾಗಿರುವ ಕೇಂದ್ರ ಸಚಿವ ಜಯಂತ್ ಸಿನ್ಹಾ ವಿರುದ್ದ ತಂದೆ ಯಶ್ವಂತ್ ಸಿನ್ಗಾ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ನವದೆಹಲಿ: ಕೊಲೆ ಆರೋಪಿಗಳಿಗೆ ಹಾರ ಹಾಕಿ ಆಕ್ರೋಶಕ್ಕೆ ತುತ್ತಾಗಿರುವ ಕೇಂದ್ರ ಸಚಿವ ಜಯಂತ್ ಸಿನ್ಹಾ ವಿರುದ್ದ ತಂದೆ ಯಶ್ವಂತ್ ಸಿನ್ಗಾ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಈ ಬಗ್ಗೆ ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಯಶ್ವಂತ್ ಸಿನ್ಹಾ, ಮಗನ ಕೃತ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ನಾನು ಲಾಯಕ್ ಮಗನ ನಾಲಾಯಕ್ ತಂದೆಯಾಗಿದ್ದೆ. ಈಗ ಪಾತ್ರಗಳು ಉಲ್ಟಾ ಆಗಿದ್ದು, ಇದೇ ಟ್ವಿಟರ್ ಮಹಿಮೆ ಎಂದು ವ್ಯಂಗ್ಯ ಮಾಡಿದ್ದಾರೆ.

ಒಂದು ವರ್ಷದ ನಂತರ ಜೂನ್ 29ರಂದು ಜಾರ್ಖಂಡ್ ಹೈ ಕೋರ್ಟ್ 8 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು. ಜೈಲಿನಿಂದ ಜಾಮೀನಿನ ಬಿಡುಗಡೆಯಾದ ಇವರೆಲ್ಲರೂ ಸ್ಥಳಿಯ ಬಿಜೆಪಿ ನಾಯಕರೊಬ್ಬರ ಜತೆ ರಾಂಚಿಯ ಜಯಂತ್ ಸಿನ್ಹಾ ಅವರ ನಿವಾಸಕ್ಕೆ ಭೇಟಿ ಕೊಟ್ಟಾಗ ಸಚಿವರು ಎಲ್ಲರನ್ನೂ ಹಾರ ಹಾಕಿ ಸ್ವಾಗತಿಸಿದ್ದಾರೆ.

Get real time updates directly on you device, subscribe now.