ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಲಿದೆ.

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಲಿದೆ. ವಿಧಾನಸೌಧದಲ್ಲಿ ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಕಾಂಗ್ರೆಸ್‌ನ 79 ಶಾಸಕರು ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ಬಜೆಟ್ ತಾರತಮ್ಯ, ಸಚಿವರಿಗೆ ಇಲಾಖಾವಾರು ಕೊಟ್ಟಿರುವ ಅನುದಾನ, ಕೈ ಶಾಸಕರ ಕ್ಷೇತ್ರದಲ್ಲಿನ ಕಾಮಗಾರಿಗಳು, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ಹಂಚಿಕೆ ಕುರಿತೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದರೊಂದಿಗೆ, ಸಭಾನಾಯಕಿಯಾಗಿ ಜಯಮಾಲಾರನ್ನು ಆಯ್ಕೆ ಮಾಡಿದ ವಿಚಾರವಾಗಿ ಅಸಮಧಾನಗೊಂಡ ಪರಿಷತ್ ಸದಸ್ಯರನ್ನು ಸಮಾಧಾನ ಮಾಡುವ ಪ್ರಯತ್ನವೂ ಇಂದು ನಡೆಯಲಿದೆ.

Get real time updates directly on you device, subscribe now.