ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್!
ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಮಾಸ್ಕೋ: ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಫ್ರಾನ್ಸ್ 4-2 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಫ್ರಾನ್ಸ್ ಪರ ಮಾರಿಯೋ ಮಾಂಡ್ಜುಕಿಕ್, ಆಂಟೊಯಿನ್ ಗ್ರೀಜ್ಮನ್, ಪಾಲ್ ಪೋಗ್ಬಾ, ಕ್ಲೈನ್ ಮೆಬ್ಯಾಪ್ ತಲಾ ಒಂದು ಗೋಲು ಬಾರಿಸಿದ್ದಾರೆ.
ಕ್ರೊವೇಶಿಯಾ ಪರ ಇವನ್ ಪೆರಿಸಿಕ್ ಮತ್ತು ಮಾರಿಯೋ ಮಂಡ್ಜುಕಿಕ್ ತಲಾ ಒಂದು ಗೋಲು ಬಾರಿಸಿದ್ದಾರೆ.
1998ರಲ್ಲಿ ಮೊದಲ ಬಾರಿಗೆ ಫಿಫಾ ವಿಶ್ವಕಪ್ ಚಾಂಪಿಯನ್ ಆಗಿದ್ದ ಫ್ರಾನ್ಸ್ 20 ವರ್ಷಗಳ ಬಳಿಕ ಇದೀಗ ಎರಡನೇ ಬಾರಿಗೆ ಫಿಫಾ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.