ಮಣಿಪಾಲ: ಕೊರೋನ ಶಂಕಿತ ವಿದ್ಯಾರ್ಥಿಗಳು ಆಸ್ಪತ್ರೆಗೆ
ಕೆಮ್ಮು ಮತ್ತು ಜ್ವರ, ಉಸಿರಾಟದ ಸಮಸ್ಯೆ ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ವಿದ್ಯಾರ್ಥಿಗಳನ್ನು ಐಸೋಲೇಷನ್ ವಾರ್ಡ್ ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ
ಕರಾವಳಿ ಕರ್ನಾಟಕ ವರದಿ
ಉಡುಪಿ: ಕೊರೋನ ವೈರಸ್ ಶಂಕಿತ ಮಣಿಪಾಲ ಮಾಹೆ ವಿದ್ಯಾಲಯದ ಮೂವರು ವಿದ್ಯಾರ್ಥಿಗಳನ್ನು ಕೆ ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓರ್ವ ವಿದ್ಯಾರ್ಥಿ ಮಲ್ಯೇಶಿಯಾದಿಂದ ಬಂದಿದ್ದು, ಒಬ್ಬ ಕುವೈಟ್ ಮತ್ತೋರ್ವ ಅಮೇರಿಕದಿಂದ ಬಂದವರಾಗಿದ್ದಾರೆ. ಕೆಮ್ಮು ಮತ್ತು ಜ್ವರ, ಉಸಿರಾಟದ ಸಮಸ್ಯೆ ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿ.ಎಚ್.ಒ ಡಾ. ಸುಧೀರ್ ಸೂಡ ಮಾಹಿತಿ ನೀಡಿದ್ದಾರೆ.
ಇವರಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ. ಮೂವರು ವಿದ್ಯಾರ್ಥಿಗಳ ಗಂಟಲ ದ್ರವ್ಯ ಮತ್ತು ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ. ವಿದ್ಯಾರ್ಥಿಗಳನ್ನು ಐಸೋಲೇಷನ್ ವಾರ್ಡ್ ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.