ಬೆಂಗಳೂರಿನಲ್ಲಿ ಆರೆಸ್ಸೆಸ್ ಮಹಾಸಮಾವೇಶ: ಸರ್ಕಾರದ ಆದೇಶ ಆರೆಸ್ಸೆಸ್ಗೆ ಅನ್ವಯವಾಗುವುದಿಲ್ಲವೆ? ಬಿಎಸ್ವೈಗೆ ಸಿದ್ದರಾಮಯ್ಯ ಪ್ರಶ್ನೆ
ಯಾವ ಸಿದ್ಧಾಂತವೂ ಮನುಷ್ಯನ ಪ್ರಾಣಕ್ಕಿಂತ ಹೆಚ್ಚಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿ ಹೊರಡಿಸಿದ ಆದೇಶ ಆರೆಸ್ಸೆಸ್ಗೆ ಅನ್ವಯವಾಗುವುದಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮಾರ್ಚ್ 15 ರಿಂದ ಬೆಂಗಳೂರಿನಲ್ಲಿ ಆರೆಸ್ಸೆಸ್ ಸಮಾವೇಶ ಅನಿರ್ಬಂಧಿತವಾಗಿ ನಡೆಯಲಿದೆ. ಆರೆಸ್ಸೆಸ್ಗೆ ಈ ಸರ್ಕಾರಿ ಆದೇಶ ಅನ್ವಯವಾಗುವುದಿಲ್ಲವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪ್ರಶ್ನಿಸಿದ್ದಾರೆ.
ಆರೆಸ್ಸೆಸ್ ಸಮಾವೇಶದಲ್ಲಿ ದೇಶದ ಹಲವೆಡೆಯಿಂದ 1500 ಕ್ಕೂ ಹೆಚ್ಚು ಪ್ರತಿನಿಧಿಗಳು ಆಗಮಿಸಲಿದ್ದಾರೆ. ಕನಿಷ್ಟ ಪಕ್ಷ ಈ ಪ್ರತಿನಿಧಿಗಳ ಆರೋಗ್ಯದ ದೃಷ್ಟಿಯಿಂದಲಾದರೂ ಸಮಾವೇಶವನ್ನು ಮುಂದೂಡುವಂತೆ ಸಿದರಾಮಯ್ಯ ಟ್ವ್ಟೀ ಮೂಲಕ ಯಡಿಯೂರಪ್ಪನವರನ್ನು ಆಗ್ರಹಿಸಿದ್ದಾರೆ.
ಯಾವ ಸಿದ್ಧಾಂತವೂ ಮನುಷ್ಯನ ಪ್ರಾಣಕ್ಕಿಂತ ಹೆಚ್ಚಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಒಂದು ವಾರದ ಕಾಲ ರಾಜ್ಯದಾದ್ಯಂತ ಮಾಲ್, ಸಿನೆಮಾ ಮಂದಿರ, ಪಬ್ ಮುಂತಾದವುಗಳನ್ನು ಬಂದ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಸಭೆ ಸಮಾರಂಭಗಳ ಮೇಲೂ ರಾಜ್ಯ ಸರ್ಕಾರ ನಿರ್ಬಂಧ ಹೇರಿದ್ದು ದೊಡ್ಡ ಮಟ್ಟದಲ್ಲಿ ಜನ ಸೇರುವುದನ್ನು ನಿರ್ಬಂಧಿಸಿದೆ.
ಇದನ್ನೂ ಓದಿ:
►►ನಾಳೆಯಿಂದ 1 ವಾರ ರಾಜ್ಯಾದ್ಯಂತ ಶಾಲಾ ಕಾಲೇಜು ಬಂದ್: http://bit.ly/3cPEuZz