ಕೊರೋನಾ ಸಂಕಷ್ಟ: ಐವತ್ತು ವರ್ಷ ಮೇಲ್ಪಟ್ಟ ಸರಕಾರಿ ನೌಕರರಿಗೆ ಕರ್ತವ್ಯದಿಂದ ವಿನಾಯ್ತಿ

ಇಲಾಖೆಯ ಪ್ರತಿ ನೌಕರರೂ ಏ. 1ರಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಾ. 31ರಂದು ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ.

ಬೆಂಗಳೂರು: ಕೊರೋನಾ ವೈರಸ್ ಸೋಂಕು ವ್ಯಾಪಕಗೊಳ್ಳಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿರುವ ರಾಜ್ಯದ ಎಲ್ಲಾ ಇಲಾಖೆಗಳ ಐವತ್ತು ವರ್ಷ ಮೇಲ್ಪಟ್ಟ ಅಧಿಕಾರಿಗಳು, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

ಕಾರ್ಮಿಕ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಅವರು ಆದೇಶ ಹೊರಡಿಸಿದ್ದು, ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ 50 ವರ್ಷದೊಳಗಿನ ಅಧಿಕಾರಿಗಳು, ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಆದೇಶಿಸಲಾಗಿದೆ.

ಇಲಾಖೆಯ ಪ್ರತಿ ನೌಕರರೂ ಏ. 1ರಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಾ. 31ರಂದು ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ.

Get real time updates directly on you device, subscribe now.