ರಾಜ್ಯಸಭೆ ಚುನಾವಣೆಗೆ ದೇವೇಗೌಡ ಕಣಕ್ಕಿಳಿಸಲು ಜೆಡಿಎಸ್ ನಿರ್ಧಾರ

ಕಾಂಗ್ರೆಸ್ ದೇವೇಗೌಡರನ್ನು ಬೆಂಬಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ದೇವೇಗೌಡರ ಮನ ಒಲಿಸಲು ಇನ್ನೂ ಸಮಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಕಣಕ್ಕಿಳಿಸಲು ನಿರ್ಧರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಗೌಡರನ್ನು ಕಣಕ್ಕಿಳಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯ ಸಂಖ್ಯಾ ಬಲ ಇಲ್ಲದಿದ್ದರೂ ದೇವೇಗೌಡರನ್ನು ಪಕ್ಷಾತೀತವಾಗಿ ಬೆಂಬಲಿಸಬಹುದು ಎಂಬ ಲೆಕ್ಕಾಚಾರದಲ್ಲಿ ಜೆಡಿಎಸ್ ಈ ನಿರ್ಧಾರಕ್ಕೆ ಬಂದಿದೆ.

ರಾಜ್ಯ ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗಬೇಕಾದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಎರಡು ಸ್ಥಾನ ಬಿಜೆಪಿಗೆ ಮತ್ತು ಒಂದು ಸ್ಥಾನ ಕಾಂಗ್ರೆಸ್‌ಗೆ ಸಿಗಲಿದೆ.

ದೇವೇಗೌಡರನ್ನು ಬೆಂಬಲಿಸುವಂತೆ ಜೆಡಿಎಸ್ ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿಲ್ಲ.

ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ದೇವೇಗೌಡರು ಆಸಕ್ತಿ ಹೊಂದಿಲ್ಲ. ಅವರ ಮನ ಒಲಿಸಲು ಇನ್ನೂ ಸಮಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ದೇವೇಗೌಡರನ್ನು ಬೆಂಬಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Get real time updates directly on you device, subscribe now.