ರಾಜ್ಯಸಭೆ ಚುನಾವಣೆ: ಪ್ರಕಾಶ್ ಶೆಟ್ಟಿ ಅಭ್ಯರ್ಥಿಯಲ್ಲ, ಈರಣ್ಣ ಕಡಾಡಿ, ಅಶೋಕ ಗಸ್ತಿ ಬಿಜೆಪಿ ಅಭ್ಯರ್ಥಿಗಳು!

ಪಕ್ಷ ಸಂಘಟಕರನ್ನು ಬಿಜೆಪಿ ಆಯ್ಕೆ ಮಾಡುವ ಮೂಲಕ ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು ರಾಜ್ಯ ಬಿಜೆಪಿಗೆ ಅಚ್ಚರಿಯ ಬೆಳವಣಿಗೆಯಾಗಿದೆ.

ಕರಾವಳಿಯ ಉದ್ಯಮಿ ಪ್ರಕಾಶ್ ಶೆಟ್ಟಿ ಸೇರಿದಂತೆ ಐವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಹೈಕಮಾಂಡ್‌ಗೆ ಕಳಿಸಲಾಗಿತ್ತು.

ಕರಾವಳಿ ಕರ್ನಾಟಕ ವರದಿ
ನವದೆಹಲಿ: ರಾಜ್ಯಸಭಾ ಚುನಾವಣೆಗೆ ಪಕ್ಷ ಸಂಘಟಕರನ್ನು ಬಿಜೆಪಿ ಆಯ್ಕೆ ಮಾಡುವ ಮೂಲಕ ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು ರಾಜ್ಯ ಬಿಜೆಪಿಗೆ ಅಚ್ಚರಿಯ ಬೆಳವಣಿಗೆಯಾಗಿದೆ.

ಬಿಜೆಪಿಯ ಬೆಳಗಾವಿ ವಿಭಾಗೀಯ ಪ್ರಭಾರಿ, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಈರಣ್ಣ ಕಡಾಡಿ ಮತ್ತು ದೇವರಾಜ ಅರಸು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ, ಜಿಲ್ಲಾ ಬಿಜೆಪಿ ಪ್ರ. ಕಾರ್ಯದರ್ಶಿ ಅಶೋಕ ಗಸ್ತಿ ಅವರು ರಾಜ್ಯಸಭೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳಾಗಿದ್ದಾರೆ.

ಈರಣ್ಣ ಲಿಂಗಾಯತರು. ರಾಯಚೂರು ಮೂಲದ ಅಶೋಕ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರಾಗಿದ್ದಾರೆ.

ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಕರಾವಳಿಯ ಉದ್ಯಮಿ ಪ್ರಕಾಶ್ ಶೆಟ್ಟಿ, ಕೆ.ಎಲ್.ಇ ಸಂಸ್ಥೆ ಮುಖ್ಯಸ್ಥ ಪ್ರಭಾಕರ ಕೋರೆ, ಮಾಜಿ ಸಂಸದ ಹುಕ್ಕೇರಿಯ ರಮೇಶ್ ಕತ್ತಿ ಸೇರಿದಂತೆ ಐವರ ಹೆಸರನ್ನು ಹೈಕಮಾಂಡ್‌ಗೆ ಕಳಿಸಲಾಗಿತ್ತು.

Get real time updates directly on you device, subscribe now.