ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ತಾಯಿಗೆ ಕೋವಿಡ್ ಸೋಂಕು ದೃಢ

ಜ್ಯೋತಿರಾದಿತ್ಯ ಅವರ ತಾಯಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಪರೀಕ್ಷೆ ಸಂದರ್ಭ ಸೋಂಕು ದೃಢ ಪಟ್ಟಿದೆ.

ಕರಾವಳಿ ಕರ್ನಾಟಕ ವರದಿ
ನವದೆಹಲಿ: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಕೊರೋನಾ ವೈರಸ್ ಸೋಂಕಿತರಾದ ಇಬ್ಬರನ್ನೂ ದಕ್ಷಿಣ ದೆಹಲಿಯ ಸಾಕೇತ್‌ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರ ತಾಯಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಪರೀಕ್ಷೆ ಸಂದರ್ಭ ಸೋಂಕು ದೃಢ ಪಟ್ಟಿದೆ.

ಜ್ಯೋತಿರಾದಿತ್ಯ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ನಾಲ್ಕು ದಿನ ಮೊದಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Get real time updates directly on you device, subscribe now.