ಡಿಕೆಶಿ ಪದಗ್ರಹಣಕ್ಕೆ ಯಡಿಯೂರಪ್ಪ ಗ್ರೀನ್ ಸಿಗ್ನಲ್

ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ಜನ ಮಾತ್ರ ಹೆಚ್ಚಿಗೆ ಸೇರುವಂತಿಲ್ಲ ಎಂದಿದ್ದಾರೆ ಯಡಿಯೂರಪ್ಪ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿ.ಕೆ.ಶಿವ ಕುಮಾರ್ ಪದಗ್ರಹಣ ಸಮಾರಂಭಕ್ಕೆ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಹೆಚ್ಚು ಜನ ಸೇರಿಸದೇ, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯಕ್ರಮ ಆಯೋಜಿಸುವುದಕ್ಕೆ ರಾಜ್ಯ ಸರಕಾರದ ಅಡ್ಡಿ ಇಲ್ಲ ಎಂದಿದ್ದಾರೆ.

ಈ ಕುರಿತು ಡಿ.ಕೆ.ಶಿವಕುಮಾರ ಅವರೊಂದಿಗೆ ಬುಧವಾರ ಮಾತಾಡಿದ್ದಾಗಿ ಯಡಿಯೂರಪ್ಪ ಹೇಳಿದ್ದಾರೆ. ಪದಗ್ರಹಣ ಸಮಾರಂಭಕ್ಕೆ ಹೆಚ್ಚು ಜನ ಸೇರಬಹುದೆಂದು ಅನುಮತಿ ನೀಡಿರಲಿಲ್ಲ. ಈ ಬಗ್ಗೆ ಶಿವಕುಮಾರ್ ವಿವರ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಷರತ್ತುಗಳಿಗೆ ಅನ್ವಯ ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ಜನ ಮಾತ್ರ ಹೆಚ್ಚಿಗೆ ಸೇರುವಂತಿಲ್ಲ ಎಂದಿದ್ದಾರೆ ಯಡಿಯೂರಪ್ಪ.

Get real time updates directly on you device, subscribe now.