‘ಪಾಕಿಸ್ತಾನ ಜಿಂದಾಬಾದ್ ಘೋಷಣೆ’ ಆರೋಪಿಗಳಿಗೆ ಜಾಮೀನು: ಎಸ್ಸೈ ಜಾಕ್ಸನ್ ಡಿ’ಸೋಜಾ ಸಸ್ಪೆಂಡ್

ಪೊಲೀಸರು ಆರೋಪಪಟ್ಟಿ ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ಆರೋಪಿ ವಿದ್ಯಾರ್ಥಿಗಳು ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದರು.

ಕರಾವಳಿ ಕರ್ನಾಟಕ ವರದಿ
ಹುಬ್ಬಳ್ಳಿ: ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜಾಕ್ಸನ್ ಡಿ’ಸೋಜ ಅವರನ್ನು ಕರ್ತವ್ಯಲೋಪಕ್ಕಾಗಿ ಅಮಾನತುಗೊಳಿಸಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಆದೇಶಿಸಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿ ವಿದ್ಯಾರ್ಥಿಗಳ ವಿರುದ್ಧ ಕಾನೂನಿನನ್ವಯ ತೊಂಬತ್ತು ದಿನಗಳ ಒಳಗೆ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ.

ಕೆ.ಎಲ್.ಇ ಕಾಲೇಜಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಫೆ.15ರಂದು ಕಾಶ್ಮೀರ ಪರ ಘೋಷಣೆ ಕೂಗುವ ಸಂದರ್ಭ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಫೇಸ್ ಬುಕ್ ಮಾಧ್ಯಮದಲ್ಲಿ ಈ ಬಗ್ಗೆ ವಿಡಿಯೋ ವೈರಲ್ ಆಗಿತ್ತು.

ಆರೋಪಿ ವಿದ್ಯಾರ್ಥಿಗಳನ್ನು ಹಿಂಡಲಗಾ ಜೈಲಿನಲ್ಲಿ ಇಡಲಾಗಿತ್ತು. ಪೊಲೀಸರು ಆರೋಪಪಟ್ಟಿ ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಎರಡನೆಯ ಜೆಎಮ್‌ಎಫ್‌ಸಿ ನ್ಯಾಯಾಲಯ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಸಿಆರ್‌ಪಿಸಿ 167(2) ಅಡಿ ಷರತ್ತುಬದ್ಧ ಜಾಮೀನು ನೀಡಿತ್ತು.

ಆರೋಪಿ ವಿದ್ಯಾರ್ಥಿಗಳು ಮತ್ತು ವಕೀಲರ ಮೇಲೆ ಕಲ್ಲು ತೂರಾಟ ನಡೆದಿದ್ದನ್ನು ಸ್ಮರಿಸಬಹುದು.

 

Get real time updates directly on you device, subscribe now.