ಕೊರೋನಾ ವೈರಸ್ ಬಗ್ಗೆ ಹೆದರುವ ಅಗತ್ಯ ಇಲ್ಲ, ಎಚ್ಚರಿಕೆ ಅಗತ್ಯ : ಉಡುಪಿ ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ಆಸ್ಪತ್ರೆಗೆ ಬಂದ ನಂತರ ಒಂದೇ ಒಂದು ಕೊರೋನ ಸಾವು ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಜಗದೀಶ್ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವ ಸಂದರ್ಭ ಹೇಳಿದರು.

ಎಸೆಸೆಲ್ಸಿ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿದೆ ಎಂಬುದಕ್ಕೆ ಯಾವುದೇ ಕುರುಹುಗಳಿಲ್ಲ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಜಿಲ್ಲೆಯಲ್ಲಿ ಐಸಿಯುನಲ್ಲಿ ನಾಲ್ವರು ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಮೂವರು ಚೇತರಿಸಿಕೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದರೂ ಶೇ.25ರಷ್ಠು ಆರೋಗ್ಯದಲ್ಲಿ ಸುಧಾರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವ ಸಂದರ್ಭ ಹೇಳಿದರು. ಉಡುಪಿ ಜಿಲ್ಲೆಯಲ್ಲಿ ಆಸ್ಪತ್ರೆಗೆ ಬಂದ ನಂತರ ಒಂದೇ ಒಂದು ಕೊರೋನ ಸಾವು ಸಂಭವಿಸಿಲ್ಲ. ಜಿಲ್ಲೆಯ ಜನರು ಕೊರೋನಾ ವೈರಸ್ ಬಗ್ಗೆ ಹೆದರುವ ಅಗತ್ಯ ಇಲ್ಲ, ಆದರೆ ಎಚ್ಚರಿಕೆ ಹೊಂದಿರುವುದು ಅಗತ್ಯ ಎಂದು ಡಿಸಿ ಹೇಳಿದರು.

ಎಸೆಸೆಲ್ಸಿ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಸೋಂಕು ಹಬ್ಬಿಲ್ಲ

ಎಸೆಸೆಲ್ಸಿ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿದೆ ಎಂಬುದಕ್ಕೆ ಯಾವುದೇ ಕುರುಹುಗಳಿಲ್ಲ. ಆ ರೀತಿ ಆಗದಂತೆ ಶಿಸ್ತುಬದ್ಧವಾಗಿ ಸುರಕ್ಷಿತ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

600ಬಸ್ ಚಾಲಕರು-ನಿರ್ವಾಹಕರಿಗೆ ಕೋವಿಡ್ ಪರೀಕ್ಷೆ

ಸರಕಾರದ ಸೂಚನೆಯನ್ವಯ ಕೆ.ಎಸ್.ಆರ್.ಟಿ.ಸಿ ಬಸ್‌ಗಳ 600ಚಾಲಕರು, ನಿರ್ವಾಹಕರು, ಮಾಲ್‌ಗಳಲ್ಲಿ ಶಾಪಿಂಗ್ ಕಾಂಪ್ಲೆಕ್ಸ್‌ಗಳಲ್ಲಿ ಇರುವವರು, ಡೆಲಿವರಿ ಬಾಯ್, ಸೇಲ್ಸ್‌ಮ್ಯಾನ್‌ಗಳನ್ನು, ಹೊಟೇಲ್‌ಗಳಲ್ಲಿರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದೆಂದರು.

ಪ್ರವಾಸಿಗರು ಜಿಲ್ಲೆಗೆ ಬರುವುದು ಬೇಡ

ಜಿಲ್ಲೆಯ ಬೀಚ್‌ಗಳನ್ನು ತೆರೆಯಲಾಗಿದ್ದರೂ ಮಕ್ಕಳು ಮತ್ತು ಹಿರಿಯರಿಗೆ ಪ್ರವೇಶ ನಿಷೇಧಿಸಲಾಗಿದೆ. ಪ್ರವಾಸಿಗರ ನಿರ್ವಹಣೆ ಕಷ್ಟವಾಗುವುದರಿಂದ ಹೊರಗಿನ ಪ್ರವಾಸಿಗರು ಜಿಲ್ಲೆಗೆ ಬರುವುದು ಬೇಡ. ಅಗತ್ಯವಿದ್ದರೆ ಮಾತ್ರ ಪ್ರಯಾಣ ಮಾಡಬೇಕು. ಅನವಶ್ಯಕವಾಗಿ ಯಾರೂ ಪ್ರಯಾಣ ಮಾಡಬಾರದು ಎಂದರು.

Get real time updates directly on you device, subscribe now.