ರಾಜ್ಯದಲ್ಲಿ ಶಾಲೆ ಆರಂಭಿಸಿದರೆ ಪಿಯುಸಿ, ಹೈಸ್ಕೂಲ್‌ಗೆ ಮೊದಲ ಆದ್ಯತೆ: ಸುರೇಶ್ ಕುಮಾರ್

ಆಗಸ್ಟ್ ತಿಂಗಳ ಬಳಿಕ ಶಾಲೆ-ಕಾಲೇಜುಗಳನ್ನು ತೆರೆಯುವ ಬಗ್ಗೆ  ಮತ್ತೆ ಚರ್ಚೆ ಆರಂಭಿಸುವುದಾಗಿ ಸ್ಪಷ್ಟಪಡಿಸಿದರು.

ಕರಾವಳಿ ಕರ್ನಾಟಕ ವರದಿ
ತುಮಕೂರು: ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸುವಂತಿದ್ದರೆ ಮೊದಲ ಹಂತದಲ್ಲಿ ಪಿಯುಸಿ, ಪ್ರೌಢಶಾಲೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.  ಆಗಸ್ಟ್ ತಿಂಗಳ ಬಳಿಕ ಶಾಲೆ-ಕಾಲೇಜುಗಳನ್ನು ತೆರೆಯುವ ಬಗ್ಗೆ  ಮತ್ತೆ ಚರ್ಚೆ ಆರಂಭಿಸುವುದಾಗಿ ಸ್ಪಷ್ಟಪಡಿಸಿದರು.

ಕೊರೋನಾ ಸೋಂಕು ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಶಾಲೆಗಳ ಆರಂಭ ದಿನದ ಕುರಿತು ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲಿಲ್ಲ ಎಂದು ಸಚಿವರು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

 

Get real time updates directly on you device, subscribe now.