ಮಂಗಳೂರಿನ ವ್ಯಕ್ತಿ ಕ್ರೈಸ್ತ ಕುಟುಂಬದಲ್ಲಿ ಜನನ, ಇಸ್ಲಾಂಗೆ ಮತಾಂತರ, ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆ

ಕುಟುಂಬದವರು ಬಾರದ ಹಿನ್ನೆಲೆಯಲ್ಲಿ ಹಿಂದೂ ಧರ್ಮದ ಸಂಪ್ರದಾಯದಂತೆ ಶವದ ಅಂತ್ಯಕ್ರಿಯೆ ನಡೆಸಿದ ಘಟನೆ.

ಮೃತ ವ್ಯಕ್ತಿಗೆ ಮಂಗಳೂರಿನಲ್ಲಿ ಪತ್ನಿ, ಮಕ್ಕಳು, ಸಂಬಂಧಿಕರು ಇದ್ದರೂ ಅಂತ್ಯಕ್ರಿಯೆಗೆ ಮುಂದಾಗಿರಲಿಲ್ಲ.

ಕರಾವಳಿ ಕರ್ನಾಟಕ ವರದಿ
ಮಡಿಕೇರಿ: ವ್ಯಕ್ತಿಯೋರ್ವರು ಮೃತಪಟ್ಟ ಸಂದರ್ಭ ಅವರ ಕುಟುಂಬದವರು ಬಾರದ ಹಿನ್ನೆಲೆಯಲ್ಲಿ ನಾಗರಿಕರೇ ಶವದ ಅಂತ್ಯಕ್ರಿಯೆ ನಡೆಸಿದ ಘಟನೆ ತಾಲೂಕಿನ ಶನಿವಾರಸಂತೆ ಸಮೀಪದ ಗೋಪಾಲಪುರ ಗ್ರಾಮದಲ್ಲಿ ವರದಿಯಾಗಿದೆ

ಮೃತ ವ್ಯಕ್ತಿಗೆ ಮಂಗಳೂರಿನಲ್ಲಿ ಪತ್ನಿ, ಮಕ್ಕಳು, ಸಂಬಂಧಿಕರು ಇದ್ದರೂ ಅಂತ್ಯಕ್ರಿಯೆಗೆ ಮುಂದಾಗಿರಲಿಲ್ಲ. ಮಾಹಿತಿ ತಿಳಿದ ಬಳಿಕವೂ ಆಸ್ಪತ್ರೆಗೆ ಭೇಟಿ ನೀಡಿರಲಿಲ್ಲ. ಮೂಲತ: ಕ್ರೈಸ್ತರಾದ ವ್ಯಕ್ತಿ ಆ ಬಳಿಕ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದರು. ಇವರ ಅಂತ್ಯಕ್ರಿಯೆ ಹಿಂದೂ ಧರ್ಮದ ಸಂಪ್ರದಾಯದಂತೆ ನಡೆದಿದೆ.

ಗೋಪಾಲಪುರ ಗ್ರಾಮದ ನಿವಾಸಿ ಯೂಸುಫ್ ಅಲಿಯಾಸ್‌ ವರ್ಗೀಸ್‌ (68) ಅವರು ಅನಾರೋಗ್ಯದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಜು.4ರಂದು ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಗೆ ಸಂಬಂಧಿಕರು ಮುಂದಾಗದ ಹಿನ್ನೆಲೆಯಲ್ಲಿ ಅನಾಥ ಶವ ಎಂದು ಪರಿಗಣಿಸಿ ಶವಾಗಾರದಲ್ಲಿ ಇರಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಲಾಗಿತ್ತು. ಈ ಮಾಹಿತಿ ತಿಳಿದ ಗೋಪಾಲಪುರದ ಸ್ಥಳೀಯರು ಮತ್ತು ಕರ್ನಾಟಕ ರಕ್ಷಣಾ ವೇದಿಕೆಯವರು ಮೃತರ ಮನೆಯವರಿಗೆ ಮಾಹಿತಿ ನೀಡಿದರೂ ಅವರು ಬರಲಿಲ್ಲ ಎನ್ನಲಾಗಿದೆ. ಈ ಸಂದರ್ಭ ಮೃತದೇಹವನ್ನು ಗೋಪಾಲಪುರ ಗ್ರಾಮಕ್ಕೆ ತಂದು ಹಿಂದೂ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದೆ.

ಕ್ರೈಸ್ತ  ಕುಟುಂಬದಲ್ಲಿ ಜನಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವರ್ಗೀಸ್ ಅವರು ಯೂಸೂಫ್ ಎಂಬ ಹೆಸರಿನಿಂದ ಇಸ್ಲಾಂ ಧರ್ಮದ ಅನುಯಾಯಿಯಾಗಿದ್ದರು. ಅವರು ಮೃತಪಟ್ಟ ಸಂದರ್ಭ ಹಿಂದೂ ಧರ್ಮದ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿದೆ.

ಜಾತಿ-ಧರ್ಮಗಳ ಹೆಸರಲ್ಲಿ ಜನ ಬಡಿದಾಡುವ ಸಂದರ್ಭ ಈ ಘಟನೆ ವಿಶೇಷ ಪ್ರಕರಣ ಎಂದು ಗುರುತಿಸಲ್ಪಟ್ಟಿದೆ.

Get real time updates directly on you device, subscribe now.