ಉಡುಪಿ: ಯುವಕನ ಕೊಲೆ ಪ್ರಕರಣ, ಆರೋಪಿಗಳ ಬಂಧನ ಕಾರ್ಯಾಚರಣೆಗೆ 3ಪೊಲೀಸ್ ತಂಡ

ಯೋಗೀಶ ಎಂಬವರನ್ನು ಜು.6ರ ರಾತ್ರಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರದಲ್ಲಿ ಯೋಗೀಶ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಬಂಧನಕ್ಕೆ ಉಡುಪಿ ಎಸ್ಪಿ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿದ್ದು ತನಿಖೆ ಚುರುಕುಗೊಂಡಿದೆ. ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚುವುದಾಗಿ ಎಸ್ಪಿ ವಿಷ್ಣುವರ್ಧನ್ ಹೇಳಿದ್ದಾರೆ.

ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರದಲ್ಲಿ ಯೋಗೀಶ ಎಂಬವರನ್ನು ಜು.6ರ ರಾತ್ರಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದಾರೆ.

ರೋಹಿತ್ ಪಿಂಟೊ, ಸುಜಿತ್ ಪಿಂಟೊ, ಪ್ರದೀಪ ಯಾನೆ ಅಣ್ಣು, ವಿನಯ ಹಾಗೂ ಅನುಷ್ ಎಂಬವರು ಯೋಗೀಶ್ ಅವರ ಹೊಟ್ಟೆ ಮತ್ತು ಬೆನ್ನಿಗೆ ಮಾರಕಾಯುಧಗಳಿಂದ ತಿವಿದು ಪರಾರಿಯಾಗಿರುವ ಬಗ್ಗೆ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.