ಯೋಗೀಶ್ ಪೂಜಾರಿ ಕೊಲೆ ಪ್ರಕರಣ: ಮಿಂಚಿನ ಕಾರ್ಯಾಚರಣೆಯಲ್ಲಿ ನಾಲ್ವರ ಸೆರೆ

ಕರಾವಳಿ ಕರ್ನಾಟಕ ವರದಿ
ಉಡುಪಿ: ಯೋಗೀಶ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ ಮಲ್ಪೆ ಪೊಲೀಸರು ನಾಲ್ವರು ಆರೋಪಿಗಳನ್ನು ಜು.7ರ ರಾತ್ರಿ ಕಲ್ಯಾಣಪುರದಲ್ಲಿ ಬಂಧಿಸಿದ್ದಾರೆ.

ರೌಡಿ ಶೀಟರ್ ಸುಜಿತ್ ಪಿಂಟೊ, ಆತನ ಸಹೋದರ ರೋಹಿತ್ ಪಿಂಟೊ, ಅಣ್ಣು ಆಲಿಯಾಸ್ ಪ್ರದೀಪ, ವಿನಯ ಬಂಧಿತ ಆರೋಪಿಗಳು.

ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಲಾಯಿತು. ಆರೋಪಿಗಳು ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಸ್ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಮಲ್ಪೆ ಎಸ್ಸೈ ತಿಮ್ಮೇಶ್ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Get real time updates directly on you device, subscribe now.