ಸುಳ್ಯ: ಸರಕಾರಿ ಆಸ್ಪತ್ರೆ ವೈದ್ಯರಿಗೆ ಕೊರೋನ, ಆಸ್ಪತ್ರೆ ಸೀಲ್‌ಡೌನ್

ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನ ಆಸ್ಪತ್ರೆ ಸೀಲ್ ಡೌನ್ ಮಾಡಲಾಗಿದೆ.

ಕರಾವಳಿ ಕರ್ನಾಟಕ ವರದಿ
ಸುಳ್ಯ: ಸರಕಾರಿ ಆಸ್ಪತ್ರೆಯ ವೈದ್ಯರು, ದಾದಿಯರು ಸೇರಿ ಆರು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನ ಆಸ್ಪತ್ರೆ ಸೀಲ್ ಡೌನ್ ಮಾಡಲಾಗಿದೆ.

ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿಯಿಂದ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಹಬ್ಬಿದೆ ಎಂದು ಶಂಕಿಸಲಾಗಿದೆ. ಈಗ ವೈದ್ಯಾಧಿಕಾರಿ ಸೇರಿ ಆರು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಇದೀಗ ಆಸ್ಪತ್ರೆಯಲ್ಲಿ ಹೊಸ ರೋಗಿಗಳಿಗೆ, ಹೆರಿಗೆಗೆ ಬರುವವರಿಗೆ ಇಂದು ಮತ್ತು ನಾಳೆ ಅವಕಾಶ ಇಲ್ಲ. ಸದ್ಯ ಇರುವ 17ಮಂದಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡಲು ಒಬ್ಬ ವೈದ್ಯಾಧಿಕಾರಿ ಮತ್ತು ಮೂವರು ನರ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಕರುಣಾಕರ ಕೆ. ವಿ. ಮಾಹಿತಿ ನೀಡಿದ್ದಾರೆ.

Get real time updates directly on you device, subscribe now.