ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಗೆ ದೇವೇಗೌಡ ಆಗ್ರಹ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡುವ ರಾಜ್ಯ ಸರಕಾರದ ಕ್ರಮ ಸ್ವಾಗತಾರ್ಹ.

ಜನತೆಯ ಆರೋಗ್ಯವೇ ಮುಖ್ಯ. ಸರಕಾರ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ಇನ್ನು ಮುಂದಾದರೂ ಎಚ್ಚತ್ತು ಕೆಲಸ ಮಾಡಿ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡುವ ರಾಜ್ಯ ಸರಕಾರದ ಕ್ರಮ ಸ್ವಾಗತಾರ್ಹ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಕೋವಿಡ್ ವೈರಸ್ ತಡೆಯುವ ನಿಟ್ಟಿನಲ್ಲಿ ಇಡೀ ರಾಜ್ಯಾದ್ಯಂತ ಲಾಕ್‌ಡೌನ್ ಮಾಡಬೇಕು ಎಂದು ದೇವೇಗೌಡ ಆಗ್ರಹಿಸಿದ್ದಾರೆ.

ಜನತೆಯ ಆರೋಗ್ಯವೇ ಮುಖ್ಯ. ಸರಕಾರ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ಇನ್ನು ಮುಂದಾದರೂ ಎಚ್ಚತ್ತು ಕೆಲಸ ಮಾಡಿ ಎಂದು ರಾಜ್ಯ ಸರಕಾರಕ್ಕೆ ದೇವೇಗೌಡ ಸಲಹೆ ನೀಡಿದ್ದಾರೆ.

ಕೊರೋನಾ ಪ್ಯಾಕೇಜ್‌ನಲ್ಲಿ ಅವ್ಯವಹಾರ ನಡೆದಿವೆ ಎಂಬ ಆರೋಪಗಳಿವೆ. ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಎಂದು ಗೌಡ ಹೇಳಿದ್ದಾರೆ.

ರಾಜ್ಯದ ಜನ ಅತೀ ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಹೊರಗೆ ಬರುವಾಗ ಮಾಸ್ಕ್ ಧರಿಸಿ ಮತ್ತು ಸುರಕ್ಷಿತ ಸಾಮಾಜಿಕ ಅಂತರ ಕಾಪಾಡಿ ಎಂದು ದೇವೇಗೌಡ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

Get real time updates directly on you device, subscribe now.