ದಕ್ಷಿಣ ಕನ್ನಡ: ಲಾಕ್‌ಡೌನ್ ಮಾಡುವಂತೆ ಸಂಸದ ಕಟೀಲ್ ಮನವಿ

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಒಂದು ವಾರ ಲಾಕ್‌ಡೌನ್ ಮಾಡುವಂತೆ ಸಿಎಂಗೆ ಸಂಸದ ಕಟೀಲು ಮನವಿ

ಕರಾವಳಿ ಕರ್ನಾಟಕ ವರದಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಒಂದು ವಾರ ಲಾಕ್‌ಡೌನ್ ಮಾಡುವಂತೆ ಸಂಸದ ನಳಿನ್ ಕುಮಾರ್ ಕಟೀಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಒಂದು ವಾರ ಲಾಕ್‌ಡೌನ್ ಮಾಡುವಂತೆ ಸಿಎಂಗೆ ಹೇಳಿದ್ದಾರೆ.

ಇಂದು ಮುಖ್ಯಮಂತ್ರಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂದರ್ಭ ಲಾಕ್‌ಡೌನ್ ಮಾಡಲು ಅವಕಾಶ ನೀಡುವಂತೆ ಮುಖ್ಯಮಂತ್ರಿಯನ್ನು ಕೋರಿದರು.

ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ.ಸಿಇಒ, ಪೊಲೀಸ್ ವರಿಷ್ಥಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಂದರ್ಭ ಇದ್ದರು.

ಡಿಸಿ ನೇತೃತ್ವದಲ್ಲಿ ಜನಪ್ರತಿನಿಧಿಗಳ, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಈ ಬಗ್ಗೆ ನಿರ್ಧಾರಕ್ಕೆ ತೀರ್ಮಾನಿಸಲಾಗಿದೆ.

Get real time updates directly on you device, subscribe now.