ದಕ್ಷಿಣ ಕನ್ನಡದಲ್ಲಿ ಜು.16ರಿಂದ ಒಂದು ವಾರ ಲಾಕ್‌ಡೌನ್: ಕೋಟ ಶ್ರೀನಿವಾಸ ಪೂಜಾರಿ

ಕೊರೋನಾ ನಿಯಂತ್ರಣ ದೃಷ್ಠಿಯಿಂದ ಲಾಕ್‌ಡೌನ್ ಅನಿವಾರ್ಯ ಎಂಬ ನಿರ್ಧಾರಕ್ಕೆ ಬರಲಾಗಿದೆ.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಗಣ್ಯ ವ್ಯಕ್ತಿಗಳು ಲಾಕ್‌ಡೌನ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಜು.16,ಗುರುವಾರದಿಂದ ಒಂದು ವಾರ ಲಾಕ್‌ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಡೀಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಗಣ್ಯ ವ್ಯಕ್ತಿಗಳು ಲಾಕ್‌ಡೌನ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಗುರುವಾರದಿಂದ ಒಂದು ವಾರ ಜಿಲ್ಲೆಯಲ್ಲಿ ಲಾಕ್‌ಡೌನ್ ನಿರ್ಧರಿಸಲಾಗಿದೆ ಎಂದು ಫೂಜಾರಿ ತಿಳಿಸಿದರು.

ಬುಧವಾರ ಮಧ್ಯರಾತ್ರಿಯಿಂದ ಲಾಕ್‌ಡೌನ್ ಜಾರಿಗೆ ಬರಲಿದೆ. ಬುಧವಾರದವರೆಗೆ ಅಂಗಡಿಗಳು ಅಗತ್ಯ ಸಾಮಗ್ರಿಗಳು ಮುಂತಾದ ಸೇವೆಗಳು ಲಭ್ಯವಿದ್ದು, ಜನ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಕೊರೋನಾ ನಿಯಂತ್ರಣ ದೃಷ್ಠಿಯಿಂದ ಲಾಕ್‌ಡೌನ್ ಅನಿವಾರ್ಯ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Get real time updates directly on you device, subscribe now.