ಉಡುಪಿ ಜಿಲ್ಲೆ ಗಡಿಗಳ ಸೀಲ್‌ಡೌನ್, ಲಾಕ್‌ಡೌನ್ ಬಗ್ಗೆ ಜು.14ರಂದು ನಿರ್ಧಾರ, ಡಿಸಿ ಜಗದೀಶ್

ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ.

ಜಿಲ್ಲೆಯ ಗಡಿಗಳನ್ನು ಬಂದ್ ಮಾಡಿದರೆ ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಸಾಧ್ಯ ಎಂದು ಮುಖ್ಯಮಂತ್ರಿಗೆ ತಿಳಿಸಿದ್ದೇನೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಜಿಲ್ಲೆಯಲ್ಲಿ ಲಾಕ್‌ಡೌನ್ ಬಗ್ಗೆ ಜು.14ರ ಬೆಳಿಗ್ಗೆ 10ಗಂಟೆಗೆ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

ಜಿಲ್ಲೆಯ ಗಡಿಗಳನ್ನು ಬಂದ್ ಮಾಡಿ ಹೊರಜಿಲ್ಲೆಯವರು ಬರುವುದನ್ನು ನಿರ್ಬಂಧಿಸಿದರೆ ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಸಾಧ್ಯ ಎಂದು ಮುಖ್ಯಮಂತ್ರಿಗೆ ತಿಳಿಸಿದ್ದೇನೆ. ಅವರು ಜನಪ್ರತಿನಿಧಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ನಿರ್ಧರಿಸುವಂತೆ ಸೂಚಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಜಿಲ್ಲೆಯ ಗಡಿಗಳ ಸೀಲ್ ಡೌನ್ ಬಗ್ಗೆ ಸಲಹೆಗಳು ಬಂದಿವೆ. ಈ ಬಗ್ಗೆ ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ. ಜಿಲ್ಲೆಯಿಂದ ಹೋಗುವವರಿಗೆ ಮತ್ತು ಬರುವವರಿಗೆ ಸಮಯಾವಕಾಶ ನೀಡಿ ಆ ಬಳಿಕ ಗಡಿ ಬಂದ್ ಮಾಡಬೇಕು ಎಂಬ ಸಲಹೆಯ ಸಾಧಕ ಭಾಧಕ ಬಗ್ಗೆ ಚರ್ಚಿಸಿ, ಲಾಕ್‌ಡೌನ್ ಬಗ್ಗೆ ಸೂಕ್ತ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

 

Get real time updates directly on you device, subscribe now.