ದ.ಕ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಉಚಿತ: ಸಚಿವ ಪೂಜಾರಿ

ಆಧಾರ್ ಕಾರ್ಡ್ ತೋರಿಸಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು, ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಕೋವಿಡ್ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು ಮತ್ತು ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಪೂಜಾರಿ ತಿಳಿಸಿದ್ದಾರೆ. ಆಧಾರ್ ಕಾರ್ಡ್ ತೋರಿಸಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಕೆ‌ಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಮತ್ತು ಸಾಮರ್ಥ್ಯ ಪರಿಶೀಲನೆ ಬಳಿಕ ಅವರು ಈ ವಿಷಯ ತಿಳಿಸಿದ್ದಾರೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಶಂಕಿತರಿಗೆ ಮತ್ತು ಸೋಂಕು ದೃಢಪಟ್ಟವರಿಗೆ ಉಚಿತ ಚಿಕಿತ್ಸೆ ಮುಂದುವರಿಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಅಧಿಕವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Get real time updates directly on you device, subscribe now.