ಜು.16: ಮಧ್ಯಾಹ್ನ 2ರ ನಂತರ ಶಿವಮೊಗ್ಗ ಜಿಲ್ಲೆ ಬಂದ್

ಸರ್ಕಾರಿ ಕಚೇರಿಗಳು, ಕೃಷಿ, ವೈದ್ಯಕೀಯ ಮತ್ತು ಇತರ ಅಗತ್ಯ ಚಟುವಟಿಕೆಗಳ ಹೊರತುಪಡಿಸಿ ಉಳಿದ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಲಾಕ್ಡೌನ್ ಮಾಡಲು ತೀರ್ಮಾನಿಸಲಾಗಿದೆ.

ಪೆಟ್ರೋಲ್ ಬಂಕ್, ಮದ್ಯದಂಗಡಿಗಳ ವ್ಯವಹಾರ ಕೂಡ ಮಧ್ಯಾಹ್ನ2ರ ಬಳಿಕ ಸ್ಥಗಿತಗೊಳಿಸಲಾಗುತ್ತದೆ.

ಕರಾವಳಿ ಕರ್ನಾಟಕ ವರದಿ
ಶಿವಮೊಗ್ಗ: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜು.16ರ ಮಧ್ಯಾಹ್ನ ಎರಡು ಗಂಟೆಯಿಂದ ಲಾಕ್ ಡೌನ್ ನಿರ್ಧಾರಕ್ಕೆ ಬರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಕಟಿಸಿದ್ದಾರೆ.

ಪ್ರತಿದಿನ ಬೆಳಿಗ್ಗೆ ಐದು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ಜನಸಂಚಾರಕ್ಕೆ ಅವಕಾಶ ಇರುತ್ತದೆ. ಆ ಬಳಿಕ ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತದೆ.

ಸರ್ಕಾರಿ ಕಚೇರಿಗಳು, ಕೃಷಿ, ವೈದ್ಯಕೀಯ ಮತ್ತು ಇತರ ಅಗತ್ಯ ಚಟುವಟಿಕೆಗಳ ಹೊರತುಪಡಿಸಿ ಉಳಿದ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಲಾಕ್ಡೌನ್ ಮಾಡಲು ತೀರ್ಮಾನಿಸಲಾಗಿದೆ.

ಪೆಟ್ರೋಲ್ ಬಂಕ್, ಮದ್ಯದಂಗಡಿಗಳ ವ್ಯವಹಾರ ಕೂಡ ಮಧ್ಯಾಹ್ನ2ರ ಬಳಿಕ ಸ್ಥಗಿತಗೊಳಿಸಲಾಗುತ್ತದೆ.

ಸಂಸದ ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ನಾನೇಂದ್ರ, ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್. ಪ್ರಸನ್ನ ಕುಮಾರ್, ಮೇಯರ್ ಸುವರ್ಣ ಶಂಕರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಉಪಸ್ಥಿತರಿದ್ದರು.

Get real time updates directly on you device, subscribe now.