ಲಾಕ್‌ಡೌನ್ ಮುಂದುವರಿಕೆ ಇಲ್ಲ: ಸಿಎಂ ಯಡಿಯೂರಪ್ಪ

ರೋಗಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೇ ಹೋಂ ಕ್ವಾರಂಟೈನ್‌ಗೆ ಒಳಪಡಿಸಬೇಕು.

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಎಂದು ಸಿಎಂ ಹೇಳಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಲಾಕ್ ‌ಡೌನ್ ಮುಂದುವರಿಸುವ ಯಾವುದೇ ಯೋಚನೆ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ.

ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ವಹಿಸಿರುವ ಸಚಿವರ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಎಂದು ಸಿಎಂ ಹೇಳಿದ್ದಾರೆ.

ರೋಗಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೇ ಹೋಂ ಕ್ವಾರಂಟೈನ್‌ಗೆ ಒಳಪಡಿಸಬೇಕು. ತೀವೃ ರೋಗಲಕ್ಷಣಗಳಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸಬೇಕೆಂದು ಸೂಚಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಬಗ್ಗೆ ಮಾಹಿತಿ ನೀಡಲು ನೋಡಲ್ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನು ನೇಮಿಸಲಾಗುವುದು ಎಂದರು.

Get real time updates directly on you device, subscribe now.