ಕೊಲ್ಲೂರು: ಕೋವಿಡ್ ಸೋಂಕಿತ ವ್ಯಕ್ತಿ ಮೃತ್ಯು

ವಾರದ ಹಿಂದೆ ಕ್ಯಾನ್ಸರ್ ರೋಗದ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು.

ಕರಾವಳಿ ಕರ್ನಾಟಕ ವರದಿ
ಬೈಂದೂರು: ಕೊಲ್ಲೂರಿನ ವ್ಯಕ್ತಿ(45ವರ್ಷ)ಯೋರ್ವರು ಕೋವಿಡ್ ಸೋಂಕಿತರಾಗಿದ್ದು, ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಒಂದು ವಾರದ ಹಿಂದೆ ಕ್ಯಾನ್ಸರ್ ರೋಗದ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ಇವರನ್ನು ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ಅಂತ್ಯಕ್ರಿಯೆ ಕೊಲ್ಲೂರಿನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

Get real time updates directly on you device, subscribe now.