ಜಾನುವಾರು ಸಾಗಾಟಗಾರರಿಗೆ ಹಲ್ಲೆಗೈದರೆ ಕಾನೂನು ಕ್ರಮ: ದ.ಕ. ಜಿಲ್ಲಾಧಿಕಾರಿ

ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೇ, ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಜಾನುವಾರು ಸಾಗಾಟ ಸಂದರ್ಭ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳಬಾರದು. ಜಾನುವಾರು ಸಾಗಿಸುವ ಜನರು ಅಥವಾ ವಾಹನಗಳ ಮೇಲೆ ದಾಳಿ ನಡೆಸಿದರೆ, ಹಲ್ಲೆಗೈದರೆ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೇ, ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.

ಬಕ್ರೀದ್ ಮತ್ತು ಇತರ ಹಬ್ಬಗಳ ಸಂದರ್ಭ ಅಕ್ರಮವಾಗಿ ಜಾನುವಾರು ಸಾಗಾಟ/ವಧೆ ತಡೆಯಲು ಕ್ರಮ ಕೈಗೊಳ್ಳಬೇಕು. ಯಾರೂ ಕೂಡ ಸರಕಾರದ ನಿಯಮ ಉಲ್ಲಂಘಿಸದಂತೆ ಡಿಸಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಮಾತಾಡಿದರು.

 

Get real time updates directly on you device, subscribe now.