ಅನ್ಲಾಕ್-3: ರಾತ್ರಿ ಕರ್ಪ್ಯೂ ರದ್ದು, ಯೋಗ, ಜಿಮ್ ಪುನರಾರಂಭ
ರಾತ್ರಿ ವೇಳೆ ಸಂಚಾರಕ್ಕೆ ಇದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ ಸ್ವಾತಂತ್ರ್ಯ ದಿನಾಚರಣೆ ನಡೆಸಬಹುದು.
ಕರಾವಳಿ ಕರ್ನಾಟಕ ವರದಿ
ನವದೆಹಲಿ: ದೇಶದಲ್ಲಿ ಕೋವಿಡ್ ನಿಯಂತ್ರಿಸಲು ವಿಧಿಸಲಾಗಿದ್ದ ನಿರ್ಬಂಧಗಳ ಸಡಿಲಿಕೆಯ ಮುಂದುವರಿದ ಹಂತವಾಗಿ ಮೂರನೇ ಹಂತದ ಮಾರ್ಗಸೂಚಿಗಳನ್ನು ಗೃಘ ಸಚಿವಾಲಯ ಬಿಡುಗಡೆ ಮಾಡಿದೆ. ರಾತ್ರಿ ವೇಳೆ ಸಂಚಾರಕ್ಕೆ ಇದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಆಗಸ್ಟ್5ರಿಂದ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಲು ಅವಕಾಶ ಮುಕ್ತವಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ ಸ್ವಾತಂತ್ರ್ಯ ದಿನಾಚರಣೆ ನಡೆಸಬಹುದು.
ಆಗಸ್ಟ್31ರ ತನಕ ಶಾಲೆ-ಕಾಲೇಜುಗಳು ಮುಚ್ಚಿರಲಿವೆ. ಕಂಟೈನ್ಮೆಂಟ್ ವಲಯಗಳಲ್ಲಿ ಆ.31ರ ವರೆಗೆ ಲಾಕ್ಡೌನ್ ಮುಂದುವರಿಯಲಿದೆ.