‘ಬಾಹುಬಲಿ’ ನಿರ್ದೇಶಕ ರಾಜಮೌಳಿ, ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕು
ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲರೂ ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ದೇಹದಲ್ಲಿ ಪ್ರತಿಕಾಯಗಳು ಅಭಿವೃದ್ಧಿ ಹೊಂದಲು ಕಾಯುತ್ತಿದ್ದೇವೆ. ಶೀಘ್ರದಲ್ಲೇ ಪ್ಲಾಸ್ಮಾ ದಾನ ಮಾಡುವುದಕ್ಕಾಗಿ ಕಾಯುತ್ತಿದ್ದೇವೆ ಎಂದು ರಾಜಮೌಳಿ ಟ್ವೀಟ್.
ಕರಾವಳಿ ಕರ್ನಾಟಕ ವರದಿ
ಹೈದರಾಬಾದ್: ‘ಬಾಹುಬಲಿ’ ಖ್ಯಾತಿಯ ತೆಲುಗಿನ ಖ್ಯಾತ ನಿರ್ದೇಶಕ ಎಸ್. ಎಸ್.ರಾಜಮೌಳಿ ಮತ್ತು ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲರೂ ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಕೆಲ ದಿನ ಹಿಂದೆ ಜ್ವರ ಬಂದಿತ್ತು. ಅದು ತಾನಾಗಿಯೇ ಕಡಿಮೆ ಆಗಿತ್ತು. ಕೋವಿಡ್- 19 ಪರೀಕ್ಷೆ ಮಾಡಿಸಿಕೊಂಡೆವು. ವರದಿ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ. ದೇಹದಲ್ಲಿ ಪ್ರತಿಕಾಯಗಳು ಅಭಿವೃದ್ಧಿ ಹೊಂದಲು ಕಾಯುತ್ತಿದ್ದೇವೆ. ಶೀಘ್ರದಲ್ಲೇ ಪ್ಲಾಸ್ಮಾ ದಾನ ಮಾಡುವುದಕ್ಕಾಗಿ ಕಾಯುತ್ತಿದ್ದೇವೆ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.
ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ನಂತರ ಇದೀಗ ತೆಲುಗಿನ ಖ್ಯಾತ ನಿರ್ದೇಶಕ ಎಸ್. ಎಸ್ . ರಾಜಮೌಳಿ ಕುಟುಂಬಕ್ಕೂ ಕೊರೋನಾ ಸೋಂಕು ತಗುಲಿದೆ.